ಸಾಂದರ್ಭಿಕ ಚಿತ್ರ 
ರಾಜ್ಯ

ನಮ್ಮ ಮೆಟ್ರೋ ಸಿಹಿ ಸುದ್ದಿ: ಗಣರಾಜ್ಯೋತ್ಸವದಂದು ಬೆಳಗ್ಗೆ 6 ಗಂಟೆಗೆ ಸಂಚಾರ ಆರಂಭ

ನಾಲ್ಕೂ ಟರ್ಮಿನಲ್​ಗಳಿಂದ ಮತ್ತು ಮೆಜೆಸ್ಟಿಕ್​ನಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(BMRCL) ತಿಳಿಸಿದೆ.

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶುಕ್ರವಾರ ಸಿಹಿ ಸುದ್ದಿ ನೀಡಿದ್ದು, ಭಾನುವಾರ ಗಣರಾಜ್ಯೋತ್ಸವದ ಅಂಗವಾಗಿ ರೈಲು ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತಿದೆ.

ಭಾನುವಾರ ನಮ್ಮ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಯ ಬದಲಿಗೆ ಬೆಳಗ್ಗೆ 6 ಗಂಟೆಯಿಂದಲೇ ಕಾರ್ಯಾರಂಭ ಮಾಡಲಿವೆ. ನಾಲ್ಕೂ ಟರ್ಮಿನಲ್​ಗಳಿಂದ ಮತ್ತು ಮೆಜೆಸ್ಟಿಕ್​ನಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(BMRCL) ತಿಳಿಸಿದೆ.

ಗಣರಾಜ್ಯೋತ್ಸವದ ಅಂಗವಾಗಿ ನಡೆಯುತ್ತಿರುವ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ(BIEC) ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೋಗಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ 20 ರೈಲುಗಳು ಸಂಚಾರ ಮಾಡಲಿವೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಲಾಲ್​ಬಾಗ್​ ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಟೋಕನ್ ಬದಲಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ. ಫ್ಲಾಟ್ 30 ರೂಪಾಯಿಯಂತೆ ಪೇಪರ್ ಟಿಕೆಟ್ ವಿತರಣೆ ಮಾಡಲಾಗುತ್ತದೆ. ಈ ಪೇಪರ್ ಟಿಕೆಟ್​ಗಳ ಮೂಲಕ ಲಾಲ್​ಬಾಗ್​ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ ಎಂದು ಬಿಎಂಆರ್ ಸಿಎಲ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!