ಮೆಟ್ರೋ ರೈಲು 
ರಾಜ್ಯ

ಮೆಟ್ರೋ ಪ್ರಯಾಣಿಕರಿಗೆ ಶಾಕ್: ಫೆಬ್ರವರಿ 1 ರಿಂದ ಪ್ರಯಾಣ ದರ ಏರಿಕೆ ಜಾರಿ ಸಾಧ್ಯತೆ

ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002 ರ ಅಡಿಯಲ್ಲಿ ದರ ನಿಗದಿ ಸಮಿತಿ (FFC) ಹೊರಡಿಸಿದ ಆದೇಶಕ್ಕೆ BMRCL ತನ್ನ ಒಪ್ಪಿಗೆ ನೀಡಿದೆ.

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಮುಂಬರುವ ಪ್ರಯಾಣ ದರ ಏರಿಕೆಯನ್ನು ಅತ್ಯಂತ ಗೌಪ್ಯವಾಗಿಟ್ಟಿದ್ದರೂ ಫೆಬ್ರುವರಿ 1 ರಿಂದ ದರ ಏರಿಕೆಯಾಗಲಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ಖಚಿತಪಡಿಸಿವೆ. ಪ್ರಯಾಣ ದರ ಶೇ. 41 ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈಗ ಮೆಟ್ರೋ ಟೋಕನ್ ದರ ರೂ. 10 ರಿಂದ 60 ರ ನಡುವೆ ಇದ್ದು, ಮೆಟ್ರೋ ಕಾರ್ಡ್‌ಗಳ ಮೇಲೆ ಶೇ. 5 ರಷ್ಟು ರಿಯಾಯಿತಿ ಇದೆ.

ದರ ಪರಿಷ್ಕರಣೆ ಸಮಿತಿ ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಯ್ಕೆ 2002ರ ಅಡಿಯಲ್ಲಿ ಶೇ. 41 ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ದರ ಪರಿಷ್ಕರಿಸಲು ರಚಿಸಲಾದ ಸಮಿತಿಯು ಶೇ. 41 ರಷ್ಟು ಹೆಚ್ಚಳವನ್ನು ಪ್ರಸ್ತಾಪಿಸಿದೆ.

ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002 ರ ಅಡಿಯಲ್ಲಿ ದರ ನಿಗದಿ ಸಮಿತಿ (FFC) ಹೊರಡಿಸಿದ ಆದೇಶಕ್ಕೆ BMRCL ತನ್ನ ಒಪ್ಪಿಗೆ ನೀಡಿದೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿರುವ ಸಮಿತಿ ಅಧ್ಯಕ್ಷ ಶ್ರೀನಿವಾಸ ಕಟಿಕಿತಾಳ ಅವರು ಒಪ್ಪಿಗೆ ಸೂಚಿಸಿದರೆ ಅದು ಕೇಂದ್ರದಿಂದ ಒಪ್ಪಿಗೆ ಪಡೆದಂತೆ. ಹೀಗಾಗಿ ದರ ಏರಿಕೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ.

ಜನ ದಟ್ಟಣೆ ಇಲ್ಲದ ಸಮಯದಲ್ಲಿ ಪ್ರಯಾಣದ ಸಮಯದಲ್ಲಿ ಶೇಕಡಾ 5 ರಷ್ಟು ರಿಯಾಯಿತಿಯನ್ನು ಹೊರತುಪಡಿಸಿ, ಮೆಟ್ರೋ ಸ್ಮಾರ್ಟ್ ಕಾರ್ಡ್‌ಗಳಂತೆಯೇ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್‌ನ ಬಳಕೆಗೆ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ. BMRCL ಸುದ್ದಿಗೋಷ್ಠಿಯನ್ನು ಮುಂದೂಡಿದ್ದು, ದರ ಹೆಚ್ಚಳ ಮುಂದಿನ ವಾರ ಜಾರಿಗೆ ಬರಲಿದೆ ಎಂದು ಮೆಟ್ರೋ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಮೆಟ್ರೋವನ್ನು ಅನುಕರಿಸುವುದು BMRCL ಪರಿಗಣಿಸಬಹುದಾದ ಒಂದು ಪರ್ಯಾಯ ಆಯ್ಕೆಯಾಗಿದೆ ಎಂದು ಮತ್ತೋರ್ವ ಅಧಿಕಾರಿ ಹೇಳಿದ್ದಾರೆ. 2017 ರಲ್ಲಿ ದೆಹಲಿಯಲ್ಲಿ ಕನಿಷ್ಠ ದರವನ್ನು ರೂ. 2 ಮತ್ತು ಗರಿಷ್ಠ ದರವನ್ನು ರೂ. 30 ರಿಂದ 60 ಕ್ಕೆ ದ್ವಿಗುಣಗೊಳಿಸಲಾಗಿತ್ತು. ಎರಡು ಹಂತಗಳಲ್ಲಿ ದರ ಏರಿಕೆಯನ್ನು ಜಾರಿಗೆ ತಂದಿತು. ಹಂತ-1 ರಲ್ಲಿ ಮೇ 10 ರಿಂದ ಸೆಪ್ಟೆಂಬರ್ 30 ರವರೆಗೆ ಕನಿಷ್ಠ ದರವನ್ನು ಹೆಚ್ಚಿಸಿತು ಆದರೆ ಗರಿಷ್ಠ ದರವನ್ನು 50 ರೂ.ಗೆ ಹೆಚ್ಚಿಸಿತು. ಅಕ್ಟೋಬರ್ 1 ರ ನಂತರ ಅದನ್ನು 60 ರೂಗೆ ಹೆಚ್ಚಿಸಲಾಗಿತ್ತು. ಆದಾಗ್ಯೂ FFC ಶಿಫಾರಸು ಅನುಸರಿಸುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳ ಕುರಿತು ವಿವರ ಒದಗಿಸಲಾಗುವುದು ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಟಿಎನ್‌ಐಇಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT