ಸಿಎಂ ಸಿದ್ದರಾಮಯ್ಯ 
ರಾಜ್ಯ

MUDA ಹಗರಣ: ಲೋಕಾಯುಕ್ತ ಕ್ಲೀನ್ ಚಿಟ್ ಬಗ್ಗೆ ಗೊತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ತಮಗೆ ಬೇಕಾದಲ್ಲಿ ಸೈಟು ಪಡೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಕ್ರಮವಾಗಿ ತಮಗೆ ಬೇಕಾದಲ್ಲಿ ಸೈಟು ಪಡೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಹಗರಣ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಜನವರಿ 27ರಂದು ವಿಚಾರಣೆ ನಡೆಸಲಿರುವ ಹೈಕೋರ್ಟ್, ಅಷ್ಟರೊಳಗೆ ತನಿಖಾ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.

ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಇದೀಗ ತನಿಖೆ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ. ಈ ವರದಿಯಲ್ಲಿ ಸಿಎಂ ಮತ್ತು ಪತ್ನಿ ವಿರುದ್ಧದ ಹೇಳಿಕೆಗೆ ಯಾವುದೇ ಪುರಾವೆಯಿಲ್ಲ. ಅಧಿಕಾರಿಗಳಿಂದ ತಪ್ಪಾಗಿತ್ತು ಎಂದು ವರದಿ ನೀಡಲಾಗಿದೆ ಎನ್ನಲಾಗಿದೆ. ಇದನ್ನು ಇನ್ನೂ ಕೋರ್ಟ್ ಗೆ ಸಲ್ಲಿಕೆ ಮಾಡಿಲ್ಲ.

ಈ ಬೆಳವಣಿಗೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಏನೂ ಗೊತ್ತಿಲ್ಲಾರೀ.. ಏನೂ ಗೊತ್ತಿಲ್ಲ’ ಎಂದು ತಮ್ಮದೇ ಶೈಲಿಯಲ್ಲಿ ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT