ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಿಹರ್ಸಲ್ NAGARAJA GADEKAL
ರಾಜ್ಯ

ಜನವರಿ 26 ಗಣರಾಜ್ಯೋತ್ಸವ: ಬೆಂಗಳೂರಿನಲ್ಲಿ ಭದ್ರತೆ, ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ದಿನ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿರುವುದರಿಂದ ನಗರದ ಈ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಈ ಮಾರ್ಗಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ವಿವರಣೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಈ ಬಾರಿ ಗಣರಾಜ್ಯೋತ್ಸವಕ್ಕೆ ಸಕಲ ತಯಾರಿ ನಡೆಸಲಾಗಿದೆ. ಯಾವುದೇ ಸಮಸ್ಯೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಪೊಲೀಸ್​ ಭದ್ರತೆ

8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್​​ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರುತ್ತಾರೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಪ್ರವೇಶ ದ್ವಾರಗಳ ವಿವರ

ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ವಾಹನ ಸಂಚಾರ ನಿರ್ಬಂಧ

ಜ.26ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ.

ವಾಹನ ನಿಲುಗಡೆಗೆ ನಿಷೇಧ

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್​​ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT