ಸಾಂದರ್ಭಿಕ ಚಿತ್ರ 
ರಾಜ್ಯ

ಬಳ್ಳಾರಿ ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಅಪಹರಣ: ಭಾರೀ ಹಣಕ್ಕೆ ಬೇಡಿಕೆ

ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದೆ.ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ.

ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದೆ. ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ.

ಸುನೀಲ್‌ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 3 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದುತಿಳಿದು ಬಂದಿದೆ. ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬಳ್ಳಾರಿ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ಜಿಲ್ಲೆಯ ಪ್ರಮುಖ ಪೊಲೀಸ್‌ ಅಧಿಕಾರಿಗಳನ್ನು ತನಿಖೆಯಲ್ಲಿ ತೊಡಿಗಿಸಲಾಗಿದೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT