ಕೆಎಸ್ಆರ್ ಟಿಸಿ ಬಸ್ 
ರಾಜ್ಯ

ಗುಂಡ್ಲುಪೇಟೆ: ಬಸ್ ನಿಂದ ತಲೆ ಹೊರಹಾಕಿದ ಮಹಿಳೆ; ಟಿಪ್ಪರ್ ಓವರ್ ಟೇಕ್ ವೇಳೆ ರುಂಡ ಕಟ್!

ಮೃತ ಮಹಿಳೆಯನ್ನು ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಎಂದು ಗುರುತಿಸಲಾಗಿದೆ.

ಗುಂಡ್ಲುಪೇಟೆ: ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ವಾಂತಿ ಮಾಡಲು ಕಿಟಕಿಯಿಂದ ತಲೆ ಹೊರಗೆ ಹಾಕಿದ ವೇಳೆ ಓವರ್ ಟೇಕ್ ಮಾಡುತ್ತಿದ್ದ ಟಿಪ್ಪರ್ ತಗುಲಿ ಮಹಿಳೆಯ ರುಂಡ ಕಟ್ ಆಗಿ ಬಿದ್ದಿರುವ ಆಘಾತಕಾರಿ ಘಟನೆ ಶನಿವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅಚಾನಕ್ ಆಗಿ ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದು, ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿದ್ದಾರೆ ಎಂದು ಚಾಮರಾಜನಗರ ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಎಂದು ಗುರುತಿಸಲಾಗಿದೆ.

ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದ ನಂತರ, ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಕ, ಡಿಎಂಇ, ಡಿಟಿಒ ಮತ್ತು ಎಸ್‌ಒ ಸೇರಿದಂತೆ ಮೈಸೂರು ನಗರ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT