ಭೀಮವ್ವ-ವೆಂಕಪ್ಪ ಅಂಬಾಜೀ-ಡಾ. ವಿಜಯಲಕ್ಷ್ಮಿ 
ರಾಜ್ಯ

76ನೇ ಗಣರಾಜ್ಯೋತ್ಸವ: ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರು ಇವರೇ!

76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪದ್ಮ ಪ್ರಶಸ್ತಿಗಳ ವಿಜೇತ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಬಾರಿ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕನ್ನಡಿಗರು ಸೇರಿದ್ದಾರೆ.

ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪದ್ಮ ಪ್ರಶಸ್ತಿಗಳ ವಿಜೇತ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಬಾರಿ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕನ್ನಡಿಗರು ಸೇರಿದ್ದಾರೆ.

ವೆಂಕಪ್ಪ ಅಂಬಾಜೀ ಸುಗಟ್ಕೇರ್, ಡಾ. ವಿಜಯಲಕ್ಷ್ಮಿ ದೇಶಮಾನೆ, ಹಾಗೂ ಭೀಮವ್ವ ದೊಡ್ಡ ಬಾಲಪ್ಪಗೆ ಪದ್ಮ ಪ್ರಶಸ್ತಿ ಲಭಿಸಿದೆ.

ವೆಂಕಪ್ಪ ಅಂಬಾಜೀ ಸುಗಟ್ಕೇರ್

ಕರ್ನಾಟಕದ ಜಾನಪದ ಗಾಯಕರಾಗಿ ಜನಪ್ರಿಯತೆ ಪಡೆದ 81 ವರ್ಷದ ವೆಂಕಪ್ಪ ಅಂಬಾಜೀ ಸುಗಟ್ಕೇರ್ ಅವರಿಗೆ ಪದ್ಮ ಪ್ರಶಸ್ತಿ ಲಭಿಸಿದೆ. 2024 ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ 110ನೇ ಮನ್ ಕಿ ಬಾತ್‌ನಲ್ಲಿ ವೆಂಕಪ್ಪ ಅಂಬಾಜೀ ಸುಗಟ್ಕೇರ್ ಹೆಸರನ್ನು ಉಲ್ಲೇಖಿಸಿದ್ದರು.

ಭೀಮವ್ವ ದೊಡ್ಡಬಾಳಪ್ಪ

ಕೊಪ್ಪಳ ಮೂಲದ ತೊಗಲುಗೊಂಬೆಯಾಟದ ಹಿರಿಯ ಕಲಾವಿದ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಡಾ.ವಿಜಯಲಕ್ಷ್ಮೀ ದೇಶಮಾನೆ

ಕಲಬುರಗಿ ಮೂಲದ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆ, ರೋಗಿಗಳ ಪಾಲಿನ ಸಾಕ್ಷಾತ್ ಧನ್ವಂತರಿ ಎಂದೇ ಹೆಸರುವಾಸಿಯಾಗಿರುವ ಡಾ.ವಿಜಯಲಕ್ಷ್ಮೀ ದೇಶಮಾನೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

1980ರಲ್ಲಿ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ವೈದ್ಯಕೀಯ ಪದವಿ ಪಡೆದರು. 1985ರಲ್ಲಿ ಬಳ್ಳಾರಿಯ ವೈದ್ಯಕೀಯಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು 1985ರಲ್ಲಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್‌ ಆಸ್ಪತ್ರೆಗೆ ಸೇರಿಕೊಂಡಿದ್ದರು. 1989ರಲ್ಲಿ ಮುಂಬೈನ ಟಾಟಾ ಸ್ಮಾರಕ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ತರಬೇತಿ ನಂತರ ಅವರು 1993ರಲ್ಲಿ ಭಾರತೀಯ ಶಸ್ತ್ರಚಿಕಿತ್ಸಕರ ಸಂಘದ ಎಫ್‍ಎಐಎಸ್ ಫೆಲೋಶಿಪ್‍ಗೆ ಪಾತ್ರರಾದರು. ಕಿದ್ವಾಯಿ ಸ್ಮಾರಕಕ್ಯಾನ್ಸರ್ ಸಂಸ್ಥೆಯ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕಿ, ಮುಖ್ಯಸ್ಥೆ, ಸಂಸ್ಥೆಯ ನಿರ್ದೇಶಕಿಯೂ ಆದರು. ಸ್ತನ ಕ್ಯಾನ್ಸರ್‌ ಕುರಿತು ಜಾಗೃತಿ ಅಭಿಯಾನ ಆರಂಭಿಸಿದ್ದರು. ಕರ್ನಾಟಕ ಕ್ಯಾನ್ಸರ್ ಸೊಸೈಟಿಯ ಉಪಾಧ್ಯಕ್ಷೆಯಾಗಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮಹಿಳಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಅಂತಾರಾಷ್ಟ್ರೀಯ ವಲಯ ರಾಷ್ಟ್ರೀಯರತ್ನ, ಕೆಂಪೇಗೌಡ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Israel -Gaza Conflict: ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ; ಶಾಂತಿ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ, ಟ್ರಂಪ್ ನಡೆಗೆ ಪ್ರಧಾನಿ ಮೋದಿ ಸ್ವಾಗತ

'Greater Bengaluru Authority' ವ್ಯಾಪ್ತಿಯಲ್ಲಿ ಇಂದಿನಿಂದ ಜಾತಿಗಣತಿ: 17 ಸಾವಿರ ಸಿಬ್ಬಂದಿಗಳ ನಿಯೋಜನೆ, ಅನಾವಶ್ಯಕ ಗೈರಾದವರಿಗೆ ಕಠಿಣ ಕ್ರಮದ ಎಚ್ಚರಿಕೆ..!

ಬಿಹಾರ ಚುನಾವಣೆಗೋಸ್ಕರ GST ಸರಳೀಕರಣ: ಕೇಂದ್ರದ ನಿರ್ಧಾರದಿಂದ ರಾಜ್ಯಕ್ಕೆ 15,000 ಕೋಟಿ ರೂ. ನಷ್ಟ; ಸಿಎಂ ಸಿದ್ದರಾಮಯ್ಯ

ಬೆಳಗಾವಿ: ದಸರಾ ರಜೆಗೆ ಹೋಗಿದ್ದ ಮೂವರು ಮಹಾರಾಷ್ಟ್ರ ಸಮುದ್ರದಲ್ಲಿ ಮುಳುಗಿ ಸಾವು- ನಾಲ್ವರು ನಾಪತ್ತೆ

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

SCROLL FOR NEXT