ಗುಂಡಿಕ್ಕಿ ಆರೋಪಿ ಫೈಝಲ್ ಬಂಧನ 
ರಾಜ್ಯ

ಗರ್ಭಿಣಿ ಹಸುವಿನ ತಲೆ ಕಡಿದ ಪ್ರಕರಣ: ಹಲ್ಲೆಗೆ ಯತ್ನಿಸಿದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧನ

ಹೊನ್ನಾವರದ ಕಾಸರಕೋಡಿನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ಮಾಡಿ ಫೈಝಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದನು.

ಉತ್ತರ ಕನ್ನಡ: ಗರ್ಭಿಣಿ ಹಸುವಿನ ಕಾಲು, ತಲೆ ಕಡಿದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ಹೊರಗೆಸೆದು ಮಾಂಸ ಕದ್ದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಉತ್ತರ ಕನ್ನಡದ ಹೊನ್ನಾವರದ ಸಾಲ್ಕೋಡುವಿನ ಕೊಂಡಕುಳಿ ಗ್ರಾಮದಲ್ಲಿ ಅತ್ಯಂತ ಭೀಕರವಾಗಿ ಗೋಹತ್ಯೆ ಮಾಡಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ. ಹೊನ್ನಾವರದ ಕಾಸರಕೋಡಿನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ಮಾಡಿ ಫೈಝಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದನು.

ಸದ್ಯ ಆರೋಪಿಯನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ನಿನ್ನೆಯಷ್ಟೇ ಪೊಲೀಸರು ಹೊನ್ನಾವರ ವಲ್ಕಿಯ 41 ವರ್ಷದ ತೌಫೀಕ್‌ನನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಪೊಲೀಸರು ಆರೋಪಿಗಳಾದ ಹೊನ್ನಾವರದ ಅಲ್ತಾಫ್ ಕಟಪುರುಸು, ಮಥಿನ್ ಕಟಪುರುಸು ಮತ್ತು ಮೊಹಮ್ಮದ್ ಹುಸೇನ್ ಖುರ್ವೆ ಎಂಬುವರನ್ನು ಬಂಧಿಸಿದ್ದರು.

ಹೊನ್ನಾವರ ತಾಲೂಕಿನ ಸಾಲಕೋಡಿನ ಕೊಂಡಾಕುಳಿಯಲ್ಲಿ ಬೆಟ್ಟಕ್ಕೆ ಮೇಯಲು ಜನವರಿ 18ರಂದು ಹೋಗಿದ್ದ ಗರ್ಭಿಣಿ ಹಸುವಿನ ಕಾಲು, ರುಂಡ ಕಡಿದು, ಗರ್ಭದಲ್ಲಿ ಬೆಳೆಯುತ್ತಿದ್ದ ಕರುವಿನ ಭ್ರೂಣ ಹೊರತೆಗೆದು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT