ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  
ರಾಜ್ಯ

ಬೆಳಗಾವಿ: 13 ದಿನಗಳ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿಸ್ಚಾರ್ಜ್, ವೈದ್ಯರಿಗೆ ಭಾವನಾತ್ಮಕ ಪತ್ರ

ಕಳೆದ ಜನವರಿ 14 ರ ಬೆಳಗಿನ ಜಾವ ಬೆಳಗಾವಿ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಅವರ ಸಹೋದರ ಇದ್ದ ಕಾರು ಅಪಘಾಕ್ಕೀಡಾಗಿತ್ತು.

ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಭಾನುವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ. ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದ್ದು, ಕಳೆದ 13 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕಳೆದ ಜನವರಿ 14 ರ ಬೆಳಗಿನ ಜಾವ ಬೆಳಗಾವಿ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಅವರ ಸಹೋದರ ಇದ್ದ ಕಾರು ಅಪಘಾಕ್ಕೀಡಾಗಿತ್ತು. ಸಚಿವೆ ಬೆನ್ನಿಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿ ಇಷ್ಟು ದಿನ ಚಿಕಿತ್ಸೆ ಪಡೆಯುತ್ತಿದ್ದರು.

ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ ಬಂದಿದ್ದೇನೆ. ಇದು ಪುನರ್ಜನ್ಮ ಅನಿಸುತ್ತೆ. ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಮತ್ತು ಸುರ್ಜೇವಾಲ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ಕ್ಷೇತ್ರದ ಎಲ್ಲ ಮತದಾರರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ ಎಂದರು.

ವೈದ್ಯರಿಗೆ ಪತ್ರ

ಈ ಸಂದರ್ಭದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಹೇಳಿರುವ ಸಚಿವೆ ಪತ್ರ ಬರೆದಿದ್ದಾರೆ. ಪ್ರಿಯ ವೈದ್ಯರೇ, ಕಳೆದ 13 ದಿನಗಳು ಇಲ್ಲಿ ನನಗೆ ಆಸ್ಪತ್ರೆಗಿಂತ ಮನೆಯಂತೆ ಭಾಸವಾಯಿತು, ನೀವು ನನ್ನ ಕುಟುಂಬಕ್ಕಿಂತ ಕಡಿಮೆಯಿಲ್ಲದಂತೆ ನನ್ನನ್ನು ನೋಡಿಕೊಂಡಿದ್ದೀರಿ. ನನ್ನ ಕಷ್ಟದ ಸಮಯದಲ್ಲಿ, ನೀವು ನನ್ನ ಪಕ್ಕದಲ್ಲಿ ನಿಂತು, ಪ್ರಬಲವಾದ ಬೆಂಬಲ ಮತ್ತು ಕಾಳಜಿಯನ್ನು ತೋರಿಸಿದ್ದೀರಿ. ನಿಮ್ಮ ದಯೆ, ತಾಳ್ಮೆ ಮತ್ತು ಸಮರ್ಪಣೆ ಹೃದಯಸ್ಪರ್ಶಿಯಾಗಿತ್ತು. ನೀವು ಹಗಲಿರುಳು ನನ್ನೊಂದಿಗೆ ಇದ್ದು ನಾನು ಸದೃಢವಾಗಲು ಕಾರಣರಾಗಿದ್ದೀರಿ ಮತ್ತು ಧೈರ್ಯ ಕಳೆದುಕೊಳ್ಳದಂತೆ ಪ್ರೇರೇಪಿಸಿದ್ದೀರಿ. ನಿಮ್ಮ ಪ್ರೋತ್ಸಾಹ ನನಗೆ ಶೀಘ್ರ ಗುಣಮುಖನಾಗಲು ಶಕ್ತಿಯನ್ನು ನೀಡಿತು ಮತ್ತು ನಿಮ್ಮ ಸಹಾನುಭೂತಿ ಮತ್ತು ಪರಿಣತಿಗೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೇನೆ. ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ಯಶ ಸಿಗಲಿ, ನಿಮಗೆ ಅತ್ಯಂತ ಉಜ್ವಲ ಭವಿಷ್ಯ ಮತ್ತು ಯಶಸ್ಸನ್ನು ಹಾರೈಸುತ್ತೇನೆ " ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ವಿಶ್ರಾಂತಿಗೆ ಸಲಹೆ

ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಇನ್ನೂ ಕೆಲ ದಿನ ಸಚಿವೆ ಸಾರ್ವಜನಿಕ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಭಾಗವಹಿಸುವುದು ಅನುಮಾನ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT