ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಮಾನನಷ್ಟ ಮೊಕದ್ದಮೆ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್ ಜಾರಿ

ಟಿಜೆ ಅಬ್ರಹಾಂ ಅವರು ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಖಾಸಗಿ ದೂರಿನ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ವಿಶೇಷ ನ್ಯಾಯಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ.

ಟಿಜೆ ಅಬ್ರಹಾಂ ಅವರು ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಬಿಎನ್‌ಎಸ್‌ಎಸ್, 2023 ರ ಸೆಕ್ಷನ್ 223 ರ ನಿಬಂಧನೆಯ ಪ್ರಕಾರ, ಯಾವುದೇ ಆದೇಶಕ್ಕೂ ಮೊದಲು, ಆರೋಪಿ ಸ್ಥಾನದಲ್ಲಿರುವವರ ವಾದ ಆಲಿಸುವುದು ಅವಶ್ಯಕ. ಹೀಗಾಗಿ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದ ಅರ್ಜಿದಾರರಲ್ಲಿ ಟಿ.ಜೆ.ಅಬ್ರಹಾಂ ಕೂಡ ಒಬ್ಬರಾಗಿದ್ದಾರೆ.

ಹಗರಣ ಸಂಬಂದ ತನಿಖೆಗೆ ಒಪ್ಪಿಗೆ ಕೋರಿ ಅಬ್ರಹಾಂ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ್ದ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದರು.

ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, 2023ರ ಬಿಎನ್‌ಎಸ್‌ಎಸ್‌ನ ಸೆಕ್ಷನ್ 356(1)(2) ಅಡಿಯಲ್ಲಿ ಅಬ್ರಹಾಂ ಅವರು ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT