ಡಿ.ಕೆ.ಶಿವಕುಮಾರ್ 
ರಾಜ್ಯ

ರಾಜಕೀಯ ಪಿತೂರಿಯಿಂದ ED ನೋಟೀಸ್; ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು: ಡಿ.ಕೆ ಶಿವಕುಮಾರ್

ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ.

ಬೆಂಗಳೂರು: ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದರು, ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ನಾನು ಮಾತನಾಡುತ್ತೇನೆ" ಎಂದು ತಿಳಿಸಿದರು.

ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಕೇಳಿದಾಗ, "ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ. ಈ ಕುರಿತಾಗಿ ಬಂದಿರುವ ನ್ಯಾಯಾಲಯದ ತೀರ್ಪುಗಳನ್ನು ನನ್ನ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೇನೆ" ಎಂದು ತಿಳಿಸಿದರು.

ಸಿಎಂ ಹುದ್ದೆ ವಿಚಾರವಾಗಿ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, "ಆ ರೀತಿಯಾಗಿ ಯಾರೂ ಏನೂ ಮಾತನಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!