ಸಂಗ್ರಹ ಚಿತ್ರ 
ರಾಜ್ಯ

ಗಣರಾಜ್ಯೋತ್ಸವ ವೇಳೆ ಅವಘಡ: ದೇಶದ 2ನೇ ಅತಿ ಎತ್ತರದ ಧ್ವಜಸ್ತಂಭದಿಂದ ಜಾರಿ ಬಿದ್ದ ತ್ರಿವರ್ಣ ಧ್ವಜ

ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್‌ ಖಾನ್ ಅವರು ಸಾಂಕೇತಿಕವಾಗಿ ಧ್ವಜಾರೋಹಣ ನೆರವೇರಿಸಿದ್ದರು. ನಂತರ ಅವರು ಅವರು ಪರೇಡ್‌ನಲ್ಲಿ ಪಥಸಂಚಲನದಲ್ಲಿ ಭಾಗಿಯಾಗಿ ಗೌರವ ವಂದನೆ ಸ್ವೀಕರಿಸುತ್ತಿದ್ದ ವೇಳೆ ಧ್ವಜ ಏಕಾಏಕಿ ಕೆಳಗೆ ಬಿದ್ದಿದೆ.

ಹೊಸಪೇಟೆ: ಗಣರಾಜ್ಯೋತ್ಸವ ಆಚರಣೆ ವೇಳೆ ದೇಶದ ಎರಡನೇ ಬೃಹತ್ ಧ್ವಜಸ್ತಂಭಕ್ಕೆ ಏರುತ್ತಿದ್ದ ಬೃಹತ್ ಧ್ವಜ ಕುಸಿದು ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಪುನೀತ್ ರಾಜ್ ಕುಮಾರ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್‌ ಖಾನ್ ಅವರು ಸಾಂಕೇತಿಕವಾಗಿ ಧ್ವಜಾರೋಹಣ ನೆರವೇರಿಸಿದ್ದರು. ನಂತರ ಅವರು ಅವರು ಪರೇಡ್‌ನಲ್ಲಿ ಪಥಸಂಚಲನದಲ್ಲಿ ಭಾಗಿಯಾಗಿ ಗೌರವ ವಂದನೆ ಸ್ವೀಕರಿಸುತ್ತಿದ್ದ ವೇಳೆ ಧ್ವಜ ಏಕಾಏಕಿ ಕೆಳಗೆ ಬಿದ್ದಿದೆ. ಘಟನೆ ವೇಳೆ ಯಾವುದೇ ಅನಾಹುತಗಳು ಸಂಭವಿಸಿಲ್ಲ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು, ತನಿಖೆಗೆ ಆದೇಶಿಸಿದ್ದು, ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಧ್ವಜಸ್ತಂಭವನ್ನು ಅಧಿಕಾರಿಗಳು ಸರಿಯಾಗಿ ನಿರ್ವಹಣೆ ಮಾಡದಿರುವುದು ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆ ತ್ರಿವರ್ಣ ಜಾರಿ ಕೆಳಗೆ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಧ್ವಜಸ್ತಂಭ ನಿರ್ವಹಣೆ ಬಗ್ಗೆ ಅಸಮಾಧಾನವಾಗಿದೆ. ತನಿಖೆ ನಡೆಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ನಾನು ಪುನೀತ್ ರಾಜ್‌ಕುಮಾರ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ್ದೆ. ಇಂತಹ ಘಟನೆ ಯಾವತ್ತೂ ನಡೆದಿಲ್ಲ. ವರದಿ ಸಲ್ಲಿಸಿದ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಮೀರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT