ಸಿದ್ದರಾಮಯ್ಯ PTI
ರಾಜ್ಯ

ಕಂದಾಯ ಸೇವೆಗಳಲ್ಲಿ ಬರೀ Quantity ವಿಲೇವಾರಿಗಿಂತ Quality ವಿಲೇವಾರಿ ಹೆಚ್ಚಾಗಬೇಕು: ಸಿಎಂ ಸಿದ್ದರಾಮಯ್ಯ

ನಾಗರಿಕರಿಗೆ ಅನುಕೂಲವಾಗುವಂತೆ ಭೂ ರೂಪಾಂತರ ಮತ್ತು ಪರಿವರ್ತನೆ ಪ್ರಕರಣಗಳನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ಕಂದಾಯ ಸೇವೆಗಳಲ್ಲಿ ವೇಗವಾದ ಮತ್ತು ಹೆಚ್ಚು ನಾಗರಿಕ ಸ್ನೇಹಿ ಸೇವೆಗಳನ್ನು ಖಚಿತಪಡಿಸಿಕೊಳ್ಳುವ ಮೂಲಕ ಅದರ ಪ್ರಗತಿ ಮತ್ತು ದಕ್ಷತೆಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಕೃಷ್ಣಾದಲ್ಲಿ ನಡೆಸಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಸೇವೆಗಳನ್ನು ಹೆಚ್ಚು ಸುಗಮ ಮಾಡಲು ನಿರಂತರ ಸುಧಾರಣೆಯ ಅಗತ್ಯವಿದೆ. ನಾಗರಿಕರಿಗೆ ಅನುಕೂಲವಾಗುವಂತೆ ಭೂ ರೂಪಾಂತರ ಮತ್ತು ಪರಿವರ್ತನೆ ಪ್ರಕರಣಗಳನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಯಾಂತ್ರೀಕೃತ ವ್ಯವಸ್ಥೆಯು ಭೂ ರೂಪಾಂತರದ ವೇಗವನ್ನು ಗಮನಾರ್ಹವಾಗಿ ಸುಧಾರಿಸಿದೆ . ಈಗ ಶೇಕಡಾ 65ರಷ್ಟು ಪ್ರಕರಣಗಳು ಒಂದು ದಿನದೊಳಗೆ ಪೂರ್ಣಗೊಳ್ಳುತ್ತಿವೆ. ಜನರು ಸಕಾಲಿಕ ಸೇವೆಗಳನ್ನು ಪಡೆಯುವ ರೀತಿಯಲ್ಲಿ ಪ್ರಕ್ರಿಯೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಕೆಲಸ ಮಾಡೋಣ". ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್‌ ಪ್ಲಾನ್‌ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಲು ಸಿಎಂ ಸೂಚನೆ ನೀಡಿದ್ದಾರೆ.

ನಗರ ಪ್ರದೇಶಗಳಲ್ಲಿ ಮಾಸ್ಟರ್‌ ಪ್ಲಾನ್‌ ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್‌, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದರು. ಆದಷ್ಟು ಬೇಗನೆ ಮಾಸ್ಟರ್‌ ಪ್ಲಾನ್‌ ಸಿದ್ದಪಡಿಸಬೇಕು. ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು. ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 3 ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಹೆಚ್ಚು ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು ಎಂದರು.

ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಲ್ಲಿ ಕೇವಲ ಒಂದು ವರ್ಷದಲ್ಲಿ ಶೇ36 ರಷ್ಟು ಪ್ರಕರಣಗಳ ವಿಲೇವಾರಿಯಾಗಿವೆ. ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ ಪ್ರಕರಣಗಳು ಸಮರೋಪಾದಿಯಲ್ಲಿ ವಿಲೇವಾರಿ ಆಗುತ್ತಿದೆ. ಆದರೆ ಉಪ ವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ ವಿಲೇವಾರಿ ವೇಗ ಕಡಿಮೆ ಇರುವುದನ್ನು ತಾಂತ್ರಿಕ ಕಾರಣಗಳ ಸಮೇತ ಸಚಿವ ಕೃಷ್ಣಬೈರೇಗೌಡರು ಸಿಎಂಗೆ ವಿವರಿದರು. ಇದನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಉಪವಿಭಾಗಾಧಿಕಾರಿ ನ್ಯಾಯಾಲಯಗಳ ಕಾರ್ಯವೈಖರಿ ಸುಧಾರಿಸಬೇಕು. ಈ ಬಗ್ಗೆ ಉಪ ವಿಭಾಗಾಧಿಕಾರಿಗಳಿಗೆ ಕೊನೆಯ ಎಚ್ಚರಿಕೆ ಕೊಡಿ ಎಂದು ಸಿಎಂ ಸೂಚಿಸಿದರು.

ಜಮೀನು ಖಾತೆಗೆ ಆಧಾರ್ ಸೀಡಿಂಗ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ 2.22 ಕೋಟಿ ಖಾತೆಗಳಿಗೆ ಆಧಾರ ಸೀಡಿಂಗ್‌ ಮಾಡಲಾಗಿದ್ದು, ಇದರಿಂದ ನಕಲಿ ದಾಖಲೆ ಸೃಷ್ಟಿಸುವುದನ್ನು ತಡೆಯಲು ಸಾಧ್ಯವಾಗಿದೆ. ಭೂ ಪರಿವರ್ತನೆಯಾಗದೆ ವಾಣಿಜ್ಯ ಉದ್ದೇಶಗಳಿಗೆ ಜಮೀನು ಬಳಕೆ ಪ್ರಕರಣಗಳನ್ನು ಪತ್ತೆ ಹಚ್ಚಲು ಇದರಿಂದ ಸಾಧ್ಯವಾಗಿದೆ. ಅನಧಿಕೃತ ಬಡಾವಣೆಗಳಿಗೆ ಖಾತಾ ನೀಡುವುದನ್ನು ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಿದ್ದೇವೆ. ಒಂದು ಅವಧಿಗೆ ಬಿ ಖಾತಾ ನೀಡುವ ಪ್ರಕ್ರಿಯೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಇನ್ನು ಮುಂದೆ ಅನಧಿಕೃತ ಬಡಾವಣೆಗಳು ತಲೆ ಎತ್ತದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆ ಇನ್ನೂ ನಿಧನ ಹೊಂದಿದವರ ಹೆಸರಿನಲ್ಲಿಯೇ ಇದೆ. ಪೌತಿ ಖಾತೆ ಅಭಿಯಾನದ ಮೂಲಕ ಮಾಲಿಕರ ಹೆಸರಿಗೆ ಜಮೀನು ಮಾಡುವ ನೋಂದಣಿ ಮಾಡುವ ಕಾರ್ಯವನ್ನು ತ್ವರಿತಗೊಳಿಸಬೇಕು ಎಂದು ಸೂಚನೆ ನೀಡಿದರು. ಭೂ ದಾಖಲೆಗಳ ರಕ್ಷಣೆಗೆ, ವಂವಕರಿಂದ ದುರುಪಯೋಗ ಆಗದಂತೆ, ದಾಖಲೆ ತಿದ್ದಲು ಅವಕಾಶ ಆಗದಂತೆ 'ಭೂ ಸುರಕ್ಷಾ' ಪರಿಣಾಮಕಾರಿಯಾಗಿ ಜಾರಿಯಾಗಲಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ಈಗಾಗಲೇ 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣ. ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆ ಕುರಿತು ಮುಖ್ಯಮಂತ್ರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT