ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ ಮೌಲ್ಯದ ವಾಹನಗಳು ಭಸ್ಮ

ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಅಗ್ನಿ ಅವಘಡ ಸಂಭವಿಸಿರುವುದು.
Manjula VN
Updated On : 29 Jan 2025, 1:11 pm

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 100ಕ್ಕೂ ಹೆಚ್ಚ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಬುಧವಾರ ನಡೆದಿದೆ.

ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಈಗಾಗಲೇ 5 ಕಾರು, 5 ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಕರಕಲಾಗಿದ್ದು, ಮತ್ತಷ್ಟು ವಾಹನಗಳಿಗೆ ಬೆಂಕಿ ಕೆನ್ನಾಲಿಗೆ ಹರಡಿದೆ. ಸುದ್ದಿ ತಿಳಿಯುತ್ತಿದ್ದಂತೆಯ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡುತ್ತಿದೆ.

Advertisement

Advertisement

ಸಿಗರೇಟ್​ ಹಚ್ಚಿ ಬೆಂಕಿ ಕಡ್ಡಿಯನ್ನು ಒಣಗಿದ ಹುಲ್ಲಿನ ಮೇಲೆ ಎಸೆದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

Also Read

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಅಗ್ನಿ ಅವಘಡ, ಯುವತಿ ಸಜೀವ ದಹನ! Video

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments