ನಿರ್ಮಲಾ ಸೀತಾರಾಮನ್,ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಕೇಂದ್ರ ಬಜೆಟ್ 2025: ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಒತ್ತಾಯ

ಮಲೆನಾಡು ಭಾಗದ ಸಮಗ್ರ ಅಭಿವೃದ್ಧಿಗೆ ಮುಂದಿನ ಐದು ವರ್ಷಗಳಲ್ಲಿ 10,000 ಕೋಟಿ ರೂ.ಗಳ ಅನುದಾನ ನೀಡಬೇಕು. ಇದು ಸೇವಾ ವಿತರಣೆಗೆ ಸಂಬಂಧಿಸಿದ ಹೆಚ್ಚಿನ ವೆಚ್ಚವನ್ನು ಪರಿಹರಿಸಲು ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಪ್ರೋತ್ಸಾಹಿಸಲು ನೆರವಾಗುತ್ತದೆ ಮತ್ತು ಪ್ರದೇಶದ ಪರಿಸರ ಪ್ರಾಮುಖ್ಯತೆಯನ್ನು ಕಾಪಾಡುತ್ತದೆ

ಬೆಂಗಳೂರು: ಶನಿವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ 2025ರಲ್ಲಿ ರಾಜ್ಯದಲ್ಲಿನ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮೋದನೆ ನೀಡಬೇಕು. ನಗರಗಳ ನಿರಂತರ ಬೆಳವಣಿಗೆಯನ್ನು ಬೆಂಬಲಿಸಲು ನಿರ್ಣಾಯಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೊಸ ಯೋಜನೆಯನ್ನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿಯಂತಹ ನಗರಗಳು ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ನೀಡುವ ನಗರವಾಗಿ ಮುಂದುವರೆದಿದ್ದು, ತ್ವರಿತ ನಗರೀಕರಣ ಮತ್ತು ದೇಶದ ಇತರ ಭಾಗಗಳಿಂದ ವಲಸಿಗರ ಹೆಚ್ಚಳದಿಂದ ಅವು ಒತ್ತಡವನ್ನು ಎದುರಿಸುತ್ತಿವೆ. ಈ ಪ್ರದೇಶಗಳಲ್ಲಿ ಕೈಗೆಟುಕುವ ದರದಲ್ಲಿ ವಸತಿ, ಸುಸ್ಥಿರ ಸಾರಿಗೆ ವ್ಯವಸ್ಥೆಗಳು, ನೀರು ಸರಬರಾಜು, ಆಧುನಿಕ ನೈರ್ಮಲ್ಯ ಸೌಲಭ್ಯಗಳು, ಗುಣಮಟ್ಟದ ಆರೋಗ್ಯ ಸೇವೆಗಳಂತಹ ಯೋಜನೆಗಳಿಗೆ ಅನುದಾನ ಒದಗಿಸುವ ಮೂಲಕಈ ಸಮಸ್ಯೆಗಳನ್ನು ಪರಿಹರಿಸಲು ಹೊಸ ಯೋಜನೆಗಳತ್ತ ಗಮನ ಹರಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಹಣ ಮೀಸಲಿಡುವಂತೆಯೂ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕಲ್ಯಾಣ ಕರ್ನಾಟಕವು ಗಮನಾರ್ಹವಾದ ಪ್ರಾದೇಶಿಕ ಅಸಮಾನತೆಗಳನ್ನು ಅನುಭವಿಸುತ್ತಲೇ ಇದೆ. ವಿಶೇಷವಾಗಿ ಮಾನವ ಅಭಿವೃದ್ಧಿ ಸೂಚ್ಯಂಕಗಳಾದ (HDI) ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಗಳ ವಿಷಯದಲ್ಲಿ ಹಿಂದೆ ಬಿದ್ದಿದೆ. ರಾಜ್ಯ ಸರ್ಕಾರ ಈ ಪ್ರದೇಶದ ಅಭಿವೃದ್ಧಿಗೆ ವಾರ್ಷಿಕ 5,000 ಕೋಟಿ ರೂ.ಗಳನ್ನು ವಿನಿಯೋಗಿಸುತ್ತಿದೆ. ಆದರೂ ಅದು ಸಾಕಾಗುತ್ತಿಲ್ಲ. ರಾಜ್ಯಕ್ಕೆ ಹೆಚ್ಚುವರಿ ಆರ್ಥಿಕ ನೆರವು ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಗಳಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಉದ್ದೇಶಿತ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಕ್ಕೆ ಈ ಬೆಂಬಲ ನಿರ್ಣಾಯಕವಾಗಿದೆ, ಅಂತಿಮವಾಗಿ ರಾಜ್ಯದಾದ್ಯಂತ ಸಮತೋಲಿತ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಸಿಎಂ ಹೇಳಿದ್ದಾರೆ.

ಮಲೆನಾಡು ಭಾಗದ ಸಮಗ್ರ ಅಭಿವೃದ್ಧಿಗೆ ಮುಂದಿನ ಐದು ವರ್ಷಗಳಲ್ಲಿ 10,000 ಕೋಟಿ ರೂ.ಗಳ ಅನುದಾನ ನೀಡಬೇಕು. ಇದು ಸೇವಾ ವಿತರಣೆಗೆ ಸಂಬಂಧಿಸಿದ ಹೆಚ್ಚಿನ ವೆಚ್ಚವನ್ನು ಪರಿಹರಿಸಲು ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಪ್ರೋತ್ಸಾಹಿಸಲು ನೆರವಾಗುತ್ತದೆ ಮತ್ತು ಪ್ರದೇಶದ ಪರಿಸರ ಪ್ರಾಮುಖ್ಯತೆಯನ್ನು ಕಾಪಾಡುತ್ತದೆ ಎಂದು ಹೇಳಿರುವ ಸಿದ್ದರಾಮಯ್ಯ, ಕೇಂದ್ರ ಪ್ರಾಯೋಜಿತ ವಿವಿಧ ಯೋಜನೆಗಳಡಿಯಲ್ಲಿ ಕಾರ್ಮಿಕರಿಗೆ ನೀಡಲಾಗುವ ಗೌರವಧನ/ಪ್ರೋತ್ಸಾಹಗಳನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರದಿಂದ ತಿಂಗಳಿಗೆ 2,700 ರೂ. ಮತ್ತು ರಾಜ್ಯದಿಂದ 7,300 ತಿಂಗಳಿಗೆ ಒಟ್ಟು 10,000 ರೂ. ಗೌರವಧನ ಪಡೆಯುತ್ತಾರೆ, ಗ್ರಾಮೀಣ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಆಶಾ ಕಾರ್ಯಕರ್ತರು ಪ್ರಸ್ತುತ ತಿಂಗಳಿಗೆ ರೂ 7,000 (ರಾಜ್ಯದಿಂದ ರೂ 5,000 ಮತ್ತು NHM ನಿಂದ ರೂ 2,000) ಪಡೆಯುತ್ತಾರೆ. ಅಂಗನವಾಡಿ ಯೋಜನೆಯಡಿ ಅಡುಗೆಯವರು ಮತ್ತು ಸಹಾಯಕರು ಕೇಂದ್ರದಿಂದ ಮಾಸಿಕ 600 ರೂ.ಗಳನ್ನು ಪಡೆಯುತ್ತಿದ್ದರೆ, ರಾಜ್ಯವು 3,100 ರೂ. ನೀಡುತ್ತಿದೆ. ಈ ಕಾರ್ಮಿಕರಿಗೆ ಉತ್ತಮ ಪ್ರೋತ್ಸಾಹ ಹಾಗೂ ಸೇವೆಗಳನ್ನು ಬಲಪಡಿಸಲು, ಕೇಂದ್ರದ ಪಾಲನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಾಸಿಕ 5,000 ರೂ.ಗೆ ಮತ್ತು ಅಡುಗೆಯವರು ಮತ್ತು ಸಹಾಯಕರಿಗೆ ಮಾಸಿಕ 2,000 ರೂ.ಗೆ ಹೆಚ್ಚಿಸಬೇಕು ಎಂದು ಅವರು ವಿವರಿಸಿದ್ದಾರೆ.

ಇತರ ಬೇಡಿಕೆಗಳೆಂದರೆ:15 ನೇ ಹಣಕಾಸು ಆಯೋಗವು ಮಾಡಿದ ಶಿಫಾರಸುಗಳ ಪ್ರಕಾರ 5,495 ಕೋಟಿ ರೂಪಾಯಿಗಳ ವಿಶೇಷ ಅನುದಾನ ಮತ್ತು 6,000 ಕೋಟಿ ರೂ.ಗಳ ರಾಜ್ಯ-ನಿರ್ದಿಷ್ಟ ಅನುದಾನ ಬಿಡುಗಡೆ ಮಾಡಬೇಕು. ವೃತ್ತಿಪರ ತೆರಿಗೆಯ ಮೇಲಿನ ಮಿತಿಯ ಪರಿಷ್ಕರಣೆ ಮಾಡಬೇಕು. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ - ವೇಗವರ್ಧಿತ ನೀರಾವರಿ ಪ್ರಯೋಜನ ಕಾರ್ಯಕ್ರಮ (PMKSY-AIBP) ಅಡಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 2023-24 ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದಂತೆ 5,300 ಕೋಟಿ ರೂ. ಬಿಡುಗಡೆ ಮಾಡಬೇಕು. ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಪ್ರಕಟಿಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್‌ಗೆ ಸೂಕ್ತ ಅರ್ಜಿ ಅಥವಾ ಅಫಿಡವಿಟ್ ಸಲ್ಲಿಸಬೇಕು. ಮೇಕೆದಾಟು ಕುಡಿಯುವ ನೀರಿನ ಯೋಜನೆಯ ವಿವರವಾದ ಯೋಜನಾ ವರದಿ ಮತ್ತು ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಅರಣ್ಯ/ರಾಷ್ಟ್ರೀಯ ಮಂಡಳಿಯಿಂದ ಅನುಮತಿ ಒದಗಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT