ಕರ್ನಾಟಕ ಹೈಕೋರ್ಟ್‌ 
ರಾಜ್ಯ

ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣಾ) ಕಾಯ್ದೆಯು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ: ಹೈಕೋರ್ಟ್

ನಗರದ ಸರ್ಜಾಪುರ ರಸ್ತೆಯ ನಿವಾಸಿ ಡಿ ಕೇಶವಮೂರ್ತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಬೆಂಗಳೂರು: ಒಂದೆಡೆ ಮೂಢನಂಬಿಕೆಗಳ ವಿರುದ್ಧ ನೀವು (ರಾಜ್ಯ ಸರ್ಕಾರ) ಕಾನೂನನ್ನು ಹೊಂದಿದ್ದರೆ, ಮತ್ತೊಂದೆಡೆ ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣಾ) ಕಾಯ್ದೆ-2021 ಅಂತಹ ಕಾನೂನನ್ನು ಹೊಂದಿದ್ದೀರಿ. ನೀವು ಎರಡನ್ನೂ ಹೇಗೆ ಸಮನ್ವಯ ಸಾಧಿಸುವಿರಿ ಎಂದು ಕರ್ನಾಟಕ ಹೈಕೋರ್ಟ್ ಪ್ರಶ್ನಿಸಿದೆ

ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣಾ) ಕಾಯ್ದೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ನಗರದ ಸರ್ಜಾಪುರ ರಸ್ತೆಯ ನಿವಾಸಿ ಡಿ ಕೇಶವಮೂರ್ತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಸಾರ್ವಜನಿಕ ಪ್ರದೇಶಗಳಲ್ಲಿ ಒಮ್ಮೆ ನಿರ್ಮಿಸಲಾದ ಪೂಜಾ ಸ್ಥಳಗಳನ್ನು ಯಾವುದೇ ರೀತಿಯಲ್ಲಿ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳು ಅಥವಾ ಮಾಹಿತಿ ಲಭ್ಯವಿದೆಯೇ ಎಂದು ನ್ಯಾಯಾಲಯ ಸರ್ಕಾರಿ ವಕೀಲರನ್ನು ಕೇಳಿದೆ. ರಸ್ತೆ ವಿಸ್ತರಣೆ ಮಾಡಲು ಉದ್ದೇಶಿಸಿದಾಗ ರಾತ್ರೋರಾತ್ರಿ ರಸ್ತೆಗಳಲ್ಲಿ ದೇವಸ್ಥಾನಗಳು ಉದ್ಭವವಾಗುತ್ತವೆ. ಅಂತಹ ಒಂದು ನಿದರ್ಶನ ಕನ್ನಡದ ‘ಉದ್ಭವ’ ಸಿನಿಮಾದಲ್ಲಿದೆ. ಸರ್ಕಾರವು ರಸ್ತೆ ವಿಸ್ತರಿಸಲು ಬಯಸಿದಾಗ, ರಾತ್ರೋರಾತ್ರಿ ಧಾರ್ಮಿಕ ಕಟ್ಟಡಗಳು ಅಲ್ಲಿ ನಿರ್ಮಾಣವಾಗುತ್ತವೆ. ಇದು ಕೋಮು ಸಮಸ್ಯೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅರ್ಜಿಯಲ್ಲಿ ಎತ್ತಲಾಗಿರುವ ವಿಚಾರಗಳು ಮುಖ್ಯವಾಗಿವೆ. ಸುಪ್ರೀಂ ಕೋರ್ಟ್ ಆದೇಶವು ಈ ನೆಲದ ಕಾನೂನಾಗಿದ್ದು, ಅದನ್ನು ಶಾಸನಸಭೆಗಳೂ ಸೇರಿದಂತೆ ಎಲ್ಲರೂ ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಅರ್ಜಿಯಲ್ಲಿ ಪ್ರಸ್ತಾಪಿಸಲಾದ ವಿಷಯಗಳ ಬಗ್ಗೆ ಫೆಬ್ರುವರಿ 25 ಅಥವಾ ಅದಕ್ಕಿಂತ ಮೊದಲು ತನ್ನ ಉತ್ತರವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿತು. ಇದೇ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಲಯ, ಆಕ್ಷೇಪಣೆಗೆ ಕಾಲಾವಕಾಶ ನೀಡಿ ಮಾರ್ಚ್ 3ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಕಾನೂನಿನ ಅನ್ವಯ ಅನುಮತಿ ಪಡೆಯದೆಯೇ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ದೇವಸ್ಥಾನಗಳು, ಚರ್ಚ್, ಮಸೀದಿ, ಗುರುದ್ವಾರ, ಬೋಧಿ ವಿಹಾರ ಇತ್ಯಾದಿಗಳನ್ನು ರಕ್ಷಿಸಲು ಆಕ್ಷೇಪಾರ್ಹ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದ ಭಾರತ ಸರ್ಕಾರ vs ಗುಜರಾತ್ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಪು ನೀಡಿದೆ. ಸುಪ್ರೀಂ ತೀರ್ಪಿನ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕ್ರಿಯೆ ಆರಂಭಿಸಿದೆ. ಹೀಗಿದ್ದರೂ, ರಾಜ್ಯ ಸರ್ಕಾರ ಕಾನೂನು ರೂಪಿಸಿದ್ದು, ಇದನ್ನು ಪಿಐಎಲ್‌ನಲ್ಲಿ ಪ್ರಶ್ನಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

ಕಾಯ್ದೆಯು ಕಾನೂನಿನ ನಿಯಮ ಮತ್ತು ಜಾತ್ಯತೀತತೆಯ ಪರಿಕಲ್ಪನೆಯ ಮೇಲೆ ಹೊಡೆಯುತ್ತದೆ. ಸೆಪ್ಟೆಂಬರ್ 29, 2009 ರ ನಂತರ ಯಾವುದೇ ಅನಧಿಕೃತ ಧಾರ್ಮಿಕ ಕಟ್ಟಡ ನಿರ್ಮಿಸಬಾರದು ಅಥವಾ ಅನುಮತಿ ನೀಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಆದಾಗ್ಯೂ, ಈ ಕಾಯ್ದೆಯು ಆ ದಿನಾಂಕದ ನಂತರ ಮತ್ತು ಅಕ್ಟೋಬರ್ 21, 2021 ರವರೆಗೆ ಅಕ್ರಮ ಕಟ್ಟಡಗಳನ್ನು ರಕ್ಷಿಸಲು ಪ್ರಯತ್ನಿಸಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ