ಸಿಎಂ ಸಿದ್ದರಾಮಯ್ಯ 
ರಾಜ್ಯ

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸಹಾಯವಾಣಿ ಆರಂಭ

ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 22340676ಗೆ ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದಿಂದ ತೆರಳಿದ್ದ ಬೆಳಗಾವಿಯ ನಾಲ್ವರು ಮೌನಿ ಅಮವ್ಯಾಸೆ ದಿನದಂದು ಸಂಭವಿಸಿದ ಕಾಲ್ಕುಳಿತದಲ್ಲಿ ಸಿಲುಕಿ ಸಾವನ್ನಪ್ಪಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಧಾವಿಸಿದೆ.

ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 22340676ಗೆ ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಇನ್ನೂ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದ ನಾಲ್ವರ ಮೃತದೇಹಗಳನ್ನು ಆಂಬ್ಯುಲೆನ್ಸ್ ಮೂಲಕ ದೆಹಲಿಗೆ ರವಾನಿಸಲಾಗಿದ್ದು, ಇಂದು ಮಧ್ಯಾಹ್ನ ದೆಹಲಿಯಿಂದ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ, ಅವರ ಮಗಳು ಮೇಘಾ, ಶೆಟ್ಟಿಗಲ್ಲಿಯ ಅರುಣ್ ಕೋಪರ್ಡೆ ಹಾಗೂ ಮಹಾದೇವಿ ಮೃತಪಟ್ಟು ದುರ್ದೈವಿಗಳು. ಮೃತದೇಹಗಳನ್ನು ಬೆಳಗಾವಿಗೆ ಏರ್ ಶಿಫ್ಟ್ ಮಾಡಲಾಗುತ್ತಿದ್ದು,ಇದಕ್ಕಾಗಿ ಬೆಳಗಾವಿಯಿಂದ ಇಬ್ಬರು ಅಧಿಕಾರಿಗಳು ಪ್ರಯಾಗ್ ರಾಜ್ ಗೆ ತೆರಳಿರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

ಕೇದಾರನಾಥಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ದೇವಸ್ಥಾನದ ಹಿಂಭಾಗದಲ್ಲಿರುವ ಈ ಅದ್ಭುತ ಜಾಗಗಳನ್ನ ಮಿಸ್ ಮಾಡ್ಬೇಡಿ..!

SCROLL FOR NEXT