ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆ: ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ

ಬೆಳಿಗ್ಗೆ ಏಕಕಾಲದಲ್ಲಿ ದಾಳಿಗಳು ಪ್ರಾರಂಭವಾದವು ಮತ್ತು ಸಂಜೆಯವರೆಗೆ ಮುಂದುವರಿಯಲಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು ಮತ್ತು ಬೆಳಗಾವಿಯಲ್ಲಿ ತಲಾ ಇಬ್ಬರು ಅಧಿಕಾರಿಗಳ ವಿರುದ್ಧ ಮತ್ತು ಚಿತ್ರದುರ್ಗ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ ತಲಾ ಒಬ್ಬ ಅಧಿಕಾರಿಗಳ ವಿರುದ್ಧ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ದಕ್ಷಿಣದಲ್ಲಿರುವ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಸಂಜಯ್ ಮಾಂದೇಡ್, ಚಿತ್ರದುರ್ಗದ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ವ್ಯವಸ್ಥಾಪಕ ಶಶಿಧರ್, ಬಾಗಲಕೋಟೆಯ ಹೊಳಗೇರಿ ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಹಿರೇಮಠ್ ಈ ಅಧಿಕಾರಿಗಳಲ್ಲಿ ಸೇರಿದ್ದಾರೆ.

ಬೆಂಗಳೂರು ಮಹಾನಗರ ಪಾಲಿಕೆಯ ಹೆಬ್ಬಾಳ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಾಧವ ರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ರಾಯಚೂರು ಜಿಲ್ಲಾ ಪಂಚಾಯತ್ ಸಹಾಯಕ ಲೆಕ್ಕಪತ್ರ ಅಧಿಕಾರಿ ನರಸಿಂಗ ರಾವ್ ಗುಜ್ಜರ್ ಮತ್ತು ಪಶುಸಂಗೋಪನಾ ಇಲಾಖೆಯ ಮೇಲ್ವಿಚಾರಕ ಸಂಜಯ್ ಅಣ್ಣಪ್ಪ ದುರ್ಗಣ್ಣವರ್ ಇತರ ಅಧಿಕಾರಿಗಳಾಗಿದ್ದಾರೆ.

ಬೆಳಿಗ್ಗೆ ಏಕಕಾಲದಲ್ಲಿ ದಾಳಿಗಳು ಪ್ರಾರಂಭವಾದವು ಮತ್ತು ಸಂಜೆಯವರೆಗೆ ಮುಂದುವರಿಯಲಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

ಥೇಟ್ 'ಡೊನಾಲ್ಡ್ ಟ್ರಂಪ್' ರೀತಿಯ ಅಪರೂಪದ ಎಮ್ಮೆ! ನೋಡಲು ಮುಗಿಬಿದ್ದ ಜನರು, Video ವೈರಲ್

SCROLL FOR NEXT