ಬೆಂಗಳೂರು: Sports ಪ್ರಾಕ್ಟಿಸ್ ನೋಡಲು ಕಂಠೀರವ ಸ್ಟೇಡಿಯಂಗೆ ಬಂದಿದ್ದ ವಿದ್ಯಾರ್ಥಿ ನಾಪತ್ತೆ!
ಕಂಠೀರವ ಸ್ಟೇಡಿಯಂನಲ್ಲಿ ಜಾವೆಲಿನ್ ಥ್ರೋ ಪ್ರಾಕ್ಟಿಸ್ ನೋಡಲು ಬಂದಿದ್ದ ಡಿಮನ್ ರಾಜ್ ಸ್ಟೇಡಿಯಂನಲ್ಲಿ ನೀರಜ್ ಚೋಪ್ರಾ ಜೊತೆ ಪೋಟೋ ತೆಗೆಸಿಕೊಂಡಿದ್ದ.
ಬೆಂಗಳೂರು: ಸ್ಪೋರ್ಟ್ಸ್ ಪ್ರಾಕ್ಟಿಸ್ ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗೊರಗುಂಟೆಪಾಳ್ಯ ನಿವಾಸಿ ಡಿಮನ್ ರಾಜ್ ನಾಪತ್ತೆಯಾದ ವಿದ್ಯಾರ್ಥಿ.
ಏಳನೇ ತರಗತಿ ಓದುತ್ತಿದ್ದ ಡಿಮನ್ ರಾಜ್ ಎಂದಿನಂತೆ ಬೆಳಗ್ಗೆ ಮನೆಯಿಂದ ಟ್ಯೂಷನ್ಗೆ ಹೋಗಿದ್ದ. ಆದರೆ ಟ್ಯೂಷನ್ಗೆ ಹೋಗದೇ ಕಂಠೀರವ ಸ್ಟೇಡಿಯಂಗೆ ಬಂದಿದ್ದ. ಕಂಠೀರವ ಸ್ಟೇಡಿಯಂನಲ್ಲಿ ಜಾವೆಲಿನ್ ಥ್ರೋ ಪ್ರಾಕ್ಟಿಸ್ ನೋಡಲು ಬಂದಿದ್ದ ಡಿಮನ್ ರಾಜ್ ಸ್ಟೇಡಿಯಂನಲ್ಲಿ ನೀರಜ್ ಚೋಪ್ರಾ ಜೊತೆ ಪೋಟೋ ತೆಗೆಸಿಕೊಂಡಿದ್ದ.
ಬಳಿಕ ಅಲ್ಲಿದ್ದ ವ್ಯಕ್ತಿಯೊಬ್ಬರ ಮೂಲಕ ಪೋಟೋವನ್ನ ತನ್ನ ತಾಯಿಗೆ ಕಳುಹಿಸಿದ್ದ. ಅನಂತರ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದಾನೆ.
ವಿದ್ಯಾರ್ಥಿ ನಾಪತ್ತೆ ಬಗ್ಗೆ ನಂದಿನಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಪೋಷಕರು ರಾತ್ರಿಯಿಡೀ ಹುಡುಕಾಟ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.