ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಜನದಟ್ಟಣೆ ಮತ್ತು ಕಾಲ್ತುಳಿತ ನಂತರದ ದೃಶ್ಯ  
ರಾಜ್ಯ

Bengaluru stampede: ಜನಸಂದಣಿ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರು ಇಂದು ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ದುರಂತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ದೊಡ್ಡ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿರ್ವಹಣೆಗಾಗಿ ಮಂಗಳವಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರು ಇಂದು ಸುತ್ತೋಲೆ ಹೊರಡಿಸಿದ್ದು, ಹಬ್ಬಗಳು, ಪ್ರತಿಭಟನೆಗಳು, ಮೆರವಣಿಗೆಗಳು ಮತ್ತು ಕ್ರೀಡಾ ಕೂಟಗಳಂತಹ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಯಾವುದೇ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡಲು ಜನಸಂದಣಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ(ಎಸ್ಒಪಿ)ವನ್ನು ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಕ್ಕೂ ಮುನ್ನ ಸ್ಥಳದ ಸಂಪೂರ್ಣ ಪರಿಶೀಲನೆ ಮತ್ತು ಕಾರ್ಯಕ್ರಮ ಆಯೋಜಕರ ಸಹಯೋಗದೊಂದಿಗೆ ವಿವರವಾದ ಯೋಜನೆ ರಚಿಸುವುದು ಈಗ ಕಡ್ಡಾಯ. ಕಾರ್ಯಕ್ರಮ ನಡೆಯುವ ಸ್ಥಳದ ಸಾಮರ್ಥ್ಯ, ತುರ್ತು ನಿರ್ಗಮನ ಮಾರ್ಗಗಳ ಲಭ್ಯತೆ ಮತ್ತು ತಂತ್ರಜ್ಞಾನದ ಬಳಕೆಯ ಸಾಧ್ಯತೆಗಳನ್ನು ಪರಿಶೀಲಿಸಲೇಬೇಕು. ಜನಸಂದಣಿ ನಿರ್ವಹಣೆಗೆ ಪೊಲೀಸರ ಹೊಣೆಗಾರಿಕೆಗಳು, ಟ್ರಾಫಿಕ್ ನಿಯಂತ್ರಣ, ವೈದ್ಯಕೀಯ ನೆರವು ಮತ್ತು ಟಿಕೆಟ್ ವ್ಯವಸ್ಥೆಗಳನ್ನು ಮಾಡಲೇಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮಾರ್ಗಸೂಚಿಗಳು

  • ಸಾರ್ವಜನಿಕರ ಪ್ರವೇಶ ದ್ವಾರಗಳಲ್ಲಿ ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಬೇಕು.

  • ಜನಸಂದಣಿಯನ್ನು ಸುಗಮಗೊಳಿಸಲು QR ಕೋಡ್ ಅಥವಾ ಬಯೋಮೆಟ್ರಿಕ್ ತಂತ್ರಜ್ಞಾನದ ಬಳಕೆ ಮತ್ತು ವಿಭಿನ್ನ ವರ್ಗಗಳಿಗೆ (ಉದಾಹರಣೆ: ಪುರುಷರು, ಮಹಿಳೆಯರು, ವೃದ್ಧರು, ವಿಶೇಷಚೇತನರು) ಪ್ರತ್ಯೇಕ ಪ್ರವೇಶ ದ್ವಾರಗಳನ್ನು ಒದಗಿಸಬೇಕು.

  • ತುರ್ತು ನಿರ್ಗಮನ ಮಾರ್ಗಗಳನ್ನು ಸ್ಪಷ್ಟವಾಗಿ ಗುರುತಿಸಬೇಕು ಮತ್ತು ಯಾವುದೇ ಸಂದರ್ಭದಲ್ಲಿಯೂ ಲೌಡ್‌ಸ್ಪೀಕರ್‌ಗಳ ಮೂಲಕ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡುವ ವ್ಯವಸ್ಥೆ ಇರಬೇಕು.

  • ಅಲ್ಲದೆ, ತುರ್ತು ವಾಹನಗಳಾದ ಅಂಬುಲೆನ್ಸ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವೈದ್ಯಕೀಯ ನೆರವಿನ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಬೇಕು.

ತುರ್ತು ಪರಿಸ್ಥಿತಿ ನಿರ್ವಹಣೆ

ಪ್ರತಿಭಟನೆ ಅಥವಾ ಹವಾಮಾನ ದುರಂತಗಳಂತಹ ಅನಿರೀಕ್ಷಿತ ಪರಿಸ್ಥಿತಿಗಳಿಗೆ ತಯಾರಿ ನಡೆಸಲು ಸಿಮ್ಯುಲೇಷನ್ ಡ್ರಿಲ್‌ಗಳನ್ನು ನಡೆಸುವ ಮೂಲಕ ರಕ್ಷಣಾ ತಂಡಗಳ ಜವಾಬ್ದಾರಿಗಳನ್ನು ಮೊದಲೇ ಗುರುತಿಸಬೇಕು. ಯಾವುದೇ ಘಟನೆಯ ಸಮಯದಲ್ಲಿ, ಪೊಲೀಸರು ಅನಗತ್ಯ ತಕರಾರುಗಳನ್ನು ತಪ್ಪಿಸಿ, ಸ್ಥಳೀಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಜನಸಂದಣಿ ನಿಯಂತ್ರಿಸಲು ಅಥವಾ ಚದುರಿಸಲು ಬಲವನ್ನು ಬಳಸುವ ಅನಿವಾರ್ಯತೆ ಬಂದಾಗ, ಮೂರು ಬಾರಿ ಎಚ್ಚರಿಕೆಗಳನ್ನು ನೀಡಿದ ನಂತರವೇ ಕಾನೂನು ರೀತಿ ನಡೆದಯಕೊಳ್ಳಬೇಕು ಮತ್ತು ಕಾನೂನುಬದ್ಧ ಬಂಧನಕ್ಕೆ ಮುಂದಾಗಬೇಕೆಂದು ಎಂದು ಮಾರ್ಗಸೂಚಿಯಲ್ಲಿದೆ.

ಜನಸಂದಣಿಯ ಸಂಚಾರ, ತೆಗೆದುಕೊಂಡ ನಿರ್ಧಾರಗಳು ಮತ್ತು ನೀಡಿದ ಎಚ್ಚರಿಕೆಗಳನ್ನು ಆಡಿಯೋ/ವಿಡಿಯೋ ದಾಖಲೆಗಳ ಮೂಲಕ ದಾಖಲಿಸಬೇಕು. ಕರ್ನಾಟಕ ಪೊಲೀಸ್​ ಕಾಯಿದೆ (KP Act) ಮತ್ತು ಬಿಎನ್‌ಎಸ್‌ಎಸ್ (BNSS – CrPC) ಪಾಲನೆಯ ಮೂಲಕ ಸಾರ್ವಜನಿಕ ಭದ್ರತೆ, ಕಾನೂನು ಸುವ್ಯವಸ್ಥೆ ಮತ್ತು ಮಾನವ ಘನತೆ ಎತ್ತಿಹಿಡಿಯುವ ಗುರಿ ಹೊಂದಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT