ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

Chinnaswamy stampede: IPS ಅಧಿಕಾರಿಗಳ ಅಮಾನತು ರದ್ದು ವಿರುದ್ಧ ಮೇಲ್ಮನವಿ: CM Siddaramaiah

ಐಪಿಎಲ್ ಅಧಿಕಾರಿಗಳು ಮತ್ತು ಪೊಲೀಸರ ಅಮಾನತಿಗೆ ಸಾಕಷ್ಟು ಕಾರಣಗಳೇ ಇಲ್ಲ ಎಂದು ಹೇಳಿದ್ದ ಸಿಎಟಿ ಯಾವುದೇ ಸಾಕಷ್ಟು ಆಧಾರಗಳಿಲ್ಲದೆ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಬೆಂಗಳೂರು: 11 ಜನರ ಸಾವಿಗೆ ಕಾರಣವಾದ ಚಿನ್ನಸ್ವಾಮಿ ಕ್ರೀಡಾಂಗಣ ಆವರಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿಗಳ ಅಮಾನತು ರದ್ದು ಮಾಡಿರುವ ಕೇಂದ್ರ ಆಡಳಿತ ನ್ಯಾಯಮಂಡಳಿ ಆದೇಶದ ವಿರುದ್ಧ ಮೇಲ್ಮನವಿ ಕುರಿತು ನಿರ್ಧರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು "ಪ್ರಾಥಮಿಕ ಹೊಣೆಗಾರ" ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಮಂಗಳವಾರ ಅಭಿಪ್ರಾಯಪಟ್ಟಿತ್ತು. ಅಲ್ಲದೆ ಸಾಕಷ್ಟು ಆಧಾರಗಳಿಲ್ಲದೆ ರಾಜ್ಯ ಸರ್ಕಾರವು ಯಾಂತ್ರಿಕವಾಗಿ ಆದೇಶ ಹೊರಡಿಸಿತ್ತು.

ಅಂತೆಯೇ ಐಪಿಎಲ್ ಅಧಿಕಾರಿಗಳು ಮತ್ತು ಪೊಲೀಸರ ಅಮಾನತಿಗೆ ಸಾಕಷ್ಟು ಕಾರಣಗಳೇ ಇಲ್ಲ ಎಂದು ಹೇಳಿದ್ದ ಸಿಎಟಿ ಯಾವುದೇ ಸಾಕಷ್ಟು ಆಧಾರಗಳಿಲ್ಲದೆ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಆದ್ದರಿಂದ, ಆಕ್ಷೇಪಾರ್ಹ ಆದೇಶವನ್ನು ರದ್ದುಗೊಳಿಸಬಹುದು ಎಂದು ಹೇಳಿತ್ತು.

ಅಲ್ಲದೆ ಕೂಡಲೇ ಅಮಾನತು ರದ್ದುಗೊಳಿಸಿ, ಅವರನ್ನು ತಕ್ಷಣವೇ ಮರುಸ್ಥಾಪಿಸಬೇಕು ಮತ್ತು ಅಮಾನತು ಅವಧಿಯನ್ನು ಪೂರ್ಣ ವೇತನ ಮತ್ತು ಭತ್ಯೆಗಳೊಂದಿಗೆ ಕರ್ತವ್ಯವೆಂದು ಪರಿಗಣಿಸಲಾಗುತ್ತದೆ. ಈ ಆದೇಶ ಅಮಾನತುಗೊಂಡ ಎಲ್ಲ ಅಧಿಕಾರಿಗಳಿಗೂ ಅನ್ವಯಿಸಬೇಕು ಎಂದು ಹೇಳಿತ್ತು.

ಮೇಲ್ಮನವಿ ಕುರಿತು ನಿರ್ಧಾರ ಎಂದ ಸಿಎಂ

ಇನ್ನು ಇದೇ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿಗಳ ಅಮಾನತು ರದ್ದು ಮಾಡಿರುವ ಕೇಂದ್ರ ಆಡಳಿತ ನ್ಯಾಯಮಂಡಳಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರ ಜತೆ ಮಾತನಾಡಿದ ಅವರು, 'ಸಿಎಟಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು' ಎಂದರು. ಅಂತೆಯೇ 'ಸಿದ್ದರಾಮಯ್ಯ ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಶಾಸಕ ಬಿ.ಆರ್. ಪಾಟೀಲ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್. ಪಾಟೀಲ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದೆವು. ನಂತರ ನನಗೆ ಮುಖ್ಯಮಂತ್ರಿ ಅವಕಾಶ ದೊರೆತಿದೆ. ಈ ಅರ್ಥದಲ್ಲಿ ಅವರು ಹೇಳಿಕೆ ನೀಡಿರಬಹುದು' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video-ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

Switzerlandನಲ್ಲಿ ಗೋವಾ ಪಬ್ ರೀತಿ ದುರಂತ: ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಮಂದಿ ದುರ್ಮರಣ, 115 ಮಂದಿಗೆ ಗಾಯ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ.ಹೆಚ್ಚಳ: ಸಾಮಾನ್ಯ ಜನರಿಗೆ ನೇರ ಹೊಡೆತ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ

SCROLL FOR NEXT