ಬಿ. ನಾಗೇಂದ್ರ 
ರಾಜ್ಯ

ವಾಲ್ಮೀಕಿ ಹಗರಣ: ಸಿಬಿಐನಿಂದ ಸಮಗ್ರ ತನಿಖೆಗೆ ಹೈಕೋರ್ಟ್ ಆದೇಶ; ಹಲವರಿಗೆ ಢವ ಢವ

ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್, ವಿಶೇಷ ತನಿಖಾ ತಂಡದ(SIT) ತನಿಖೆಯನ್ನು ರದ್ದುಗೊಳಿಸಿ, ಪ್ರಕರಣದ ಸಮಗ್ರ ತನಿಖೆಗೆ ನಡೆಸುವಂತೆ ಸಿಬಿಐಗೆ ಸೂಚಿಸಿದೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಹೈಕೋರ್ಟ್‌ ಮಂಗಳವಾರ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್‌ನ ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಸಿಬಿಐನಿಂದ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್​ ಯತ್ನಾಳ್​, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್​ ಬಂಗಾರಪ್ಪ ಅವರು ರಿಟ್​ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್, ವಿಶೇಷ ತನಿಖಾ ತಂಡದ(SIT) ತನಿಖೆಯನ್ನು ರದ್ದುಗೊಳಿಸಿ, ಪ್ರಕರಣದ ಸಮಗ್ರ ತನಿಖೆಗೆ ನಡೆಸುವಂತೆ ಸಿಬಿಐಗೆ ಸೂಚಿಸಿದೆ. ಅಲ್ಲದೇ ಎಸ್‌ಐಟಿ ಸಂಗ್ರಹಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಆದೇಶಿಸಿದೆ.

ಇನ್ನು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್​ ಬ್ಯಾಂಕ್​ ಆಫ್​ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ತಿರಸ್ಕರಿಸಿತ್ತು.

ಈ ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬ್ಯಾಂಕ್ ಮನವಿ ಮಾಡಿತ್ತು. ಆದರೆ, ಹೈಕೋರ್ಟ್​ ಈ ಮನವಿಯನ್ನು ತಿರಸ್ಕರಿಸಿತ್ತು. ಈಗ ಬಿಜೆಪಿ ನಾಯಕರ ಅರ್ಜಿ ಪುರಸ್ಕರಿಸಿ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು, ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಹಲವರಿಗೆ ಢವ ಢವ ಶುರುವಾಗಿದೆ.

ಏನಿದು ಪ್ರಕರಣ?

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆಯ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿದೆ.

ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು.

ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಬಳಿಕ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಇಡಿ ಅವರನ್ನು ವಶಕ್ಕೆ ಪಡೆದುಕೊಂಡು ಬಂಧನಕ್ಕೆ ಒಳಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT