ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಬಿಜೆಪಿ ಮುಖಂಡನ ಮನೆಯಲ್ಲಿ UPS ಸ್ಫೋಟಗೊಂಡು ಇಬ್ಬರು ಸಾವು

ರಾತ್ರಿ ವೇಳೆ ರುದ್ರಮುನಿ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಯುಪಿಎಸ್ ಉಪಕರಣವು ಅನಿರೀಕ್ಷಿತವಾಗಿ ಸ್ಫೋಟಗೊಂಡಿದ್ದು, ಇದರಿಂದ ದಟ್ಟ ಹೊಗೆ ಇಡೀ ಮನೆಗೆ ವ್ಯಾಪಿಸಿದೆ.

ದಾವಣಗೆರೆ: ಮನೆಯೊಂದರಲ್ಲಿದ್ದ ಯುಪಿಎಸ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ವಿಮಲಾಬಾಯಿ ಮತ್ತು ಕುಮಾರ್ ಜೈನ್ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಹಿರೇಮಠ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲಾಗಿದೆ.

ರಾತ್ರಿ ವೇಳೆ ರುದ್ರಮುನಿ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಯುಪಿಎಸ್ ಉಪಕರಣವು ಅನಿರೀಕ್ಷಿತವಾಗಿ ಸ್ಫೋಟಗೊಂಡಿದ್ದು, ಇದರಿಂದ ದಟ್ಟ ಹೊಗೆ ಇಡೀ ಮನೆಗೆ ವ್ಯಾಪಿಸಿದೆ. ಘಟನೆ ಸಂಭವಿಸಿದಾಗ ಮನೆಯಲ್ಲಿ ಒಟ್ಟು ಆರು ಜನರಿದ್ದರು. ಇವರ ಪೈಕಿ ನಾಲ್ವರು ಮನೆಯ ಹಿಂದಿನ ಬಾಗಿಲಿನಿಂದ ತಕ್ಷಣವೇ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕುಮಾರ್ ಜೈನ್ ಮತ್ತು ವಿಮಲಾಬಾಯಿ ಅವರಿಗೆ ದಟ್ಟ ಹೊಗೆಯಿಂದಾಗಿ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಈ ಘಟನೆ ಕುರಿತು ಸ್ಥಳೀಯ ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುಪಿಎಸ್ ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ತಾಂತ್ರಿಕ ದೋಷ ಅಥವಾ ಉಪಕರಣದ ನಿರ್ವಹಣೆಯ ಕೊರತೆಯು ಈ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT