ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ರೈಲ್ವೆ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಿರಿ; ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ: ಸಿಎಂ ಸಿದ್ದರಾಮಯ್ಯ

ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ.

ಬೆಂಗಳೂರು: ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ

ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ.

ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ನಮ್ಮ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಹಾಲಿನ ದರ ಏರಿಕೆ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿ ಕರ್ನಾಟಕ ನಾಯಕರು ತಮ್ಮದೇ ಸರ್ಕಾರ ರೈಲು ಪ್ರಯಾಣ ಹೆಚ್ಚಿಸಿದಾಗ ಸದ್ದಿಲ್ಲದೆ ಬಿಲ ಸೇರಿಕೊಂಡಿದ್ದಾರೆ. ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಏರಿಕೆಯಾದಾಗ ಬೀದಿಗಿಳಿದಿದ್ದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಪ್ರತಿನಿಧಿಗಳನ್ನು ಹೊಂದಿರುವ ದರ ನಿರ್ಣಯ ಸಮಿತಿಯೇ ಆ ಏರಿಕೆಯ ನಿರ್ಧಾರ ಕೈಗೊಂಡಿರುವುದನ್ನು ಬಚ್ಚಿಟ್ಟು ನಮ್ಮ ಸರ್ಕಾರದ ವಿರುದ್ದ ಜನರನ್ನು ಎತ್ತಿಕಟ್ಟುವ ವಿಫಲ ಪ್ರಯತ್ನ ನಡೆಸಿದ್ದರು ಎಂದು ಹರಿ ಹಾಯ್ದಿದ್ದಾರೆ.

ರೈಲ್ವೆ ಇಲಾಖೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದು, ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಈ ಸಾರಿಗೆ ವ್ಯವಸ್ಥೆ ಈಗಲೂ ಲಾಭದಾಯಕವಾಗಿದೆ. ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಬಜೆಟ್ ಮಂಡನೆಯ ಪದ್ಧತಿಯನ್ನು ನರೇಂದ್ರ ಮೋದಿ ಸರ್ಕಾರ ಕೈಬಿಟ್ಟಿರುವ ಕಾರಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೊದಲು ಇಲಾಖೆಯ ಕಾರ್ಯನಿರ್ವಹಣೆಯ ಬಗ್ಗೆ ಶ್ವೇತಪತ್ರವನ್ನು ದೇಶದ ಜನತೆಯ ಮುಂದಿಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ, ಆದ್ರೂ ಯಾವುದೇ ಲಾಭ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ

DKS ನಟ್ಟು ಬೋಲ್ಟು ಹೇಳಿಕೆ ಕಿತಾಪತಿಗೆ ಸಾಧು ಕೋಕಿಲ ಕಾರಣ: ದರ್ಶನ್ ಸ್ನೇಹದ ಬಗ್ಗೆ ನಟ ಸುದೀಪ್ ಹೇಳಿದ್ದೇನು?

Indian Stock Market: GDP ವರದಿ ಎಫೆಕ್ಟ್; ಹೂಡಿಕೆದಾರರಿಗೆ 5 ಲಕ್ಷ ಕೋಟಿ ರೂ ಲಾಭ!

'Vote chori' ಮಾಹಿತಿಯ ಹೈಡ್ರೋಜನ್ ಬಾಂಬ್ ಬರ್ತಾ ಇದೆ.. PM Modi ಮುಖ ಕೂಡ ತೋರಿಸಲಾಗಲ್ಲ: Rahul Gandhi

'ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಎಲ್ಲ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ': ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ

SCROLL FOR NEXT