ಸಿದ್ದರಾಮಯ್ಯ-ನಾರಾಯಣ ಭರಮನಿ 
ರಾಜ್ಯ

ಸ್ವಾಭಿಮಾನದ ಪ್ರಶ್ನೆ: ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯರಿಂದ ಅಪಮಾನ; ಸ್ವಯಂನಿವೃತ್ತಿಗೆ ASP ಮುಂದು!

ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದರು.

ಧಾರವಾಡ: ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದರು. ಸಾರ್ವಜನಿಕವಾಗಿ ಈ ಅನಿರೀಕ್ಷಿತ ನಡೆಯಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರು ಸ್ವಯಂ ಘೋಷಿತ ರಾಜೀನಾಮೆಗೆ ಮುಂದಾಗಿದ್ದಾರೆ. ನಾರಾಯಣ ಭರಮನಿ ಅವರು ಅದಾಗಲೇ ರಾಜೀನಾಮೆಗೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಅವರ ಮನವೊಲಿಸುವ ಪ್ರಯತ್ನಗಳನ್ನು ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಪ್ರತಿಭಟನಾ ಸಭೆ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಕೋಪಗೊಂಡಿದ್ದ ಸಿದ್ದರಾಮಯ್ಯ ಕರ್ತವ್ಯದಲ್ಲಿದ್ದ ನಾರಾಯಣ ಭರಮನಿ ಅವರನ್ನು ವೇದಿಕೆಗೆ ಕರೆದು ಹೊಡೆಯಲು ಕೈ ಎತ್ತಿದ್ದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಸಿದ್ದರಾಮಯ್ಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ನಾರಾಯಣ ಭರಮನಿ ಅವರು 1994ರ ಬ್ಯಾಚ್‌ನ ಪೊಲೀಸ್ ಅಧಿಕಾರಿಯಾಗಿದ್ದ 2007ರಲ್ಲಿ ನಡೆದ ಕುಖ್ಯಾತ ರೌಡಿ ಪ್ರವೀಣ್ ಶಿಂತ್ರೆ ಎನ್‌ಕೌಂಟರ್ ನ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT