ಇನ್ಫೋಸಿಸ್  
ರಾಜ್ಯ

ಬೆಂಗಳೂರು: ಕಚೇರಿ ಶೌಚಾಲಯದಲ್ಲಿ ಮಹಿಳೆಯ ವಿಡಿಯೋ ರೆಕಾರ್ಡ್‌; ಇನ್ಫೋಸಿಸ್ ಟೆಕ್ಕಿ ಬಂಧನ

ನಾಗೇಶ್ ಸ್ವಪ್ನಿಲ್ ಮಲಿ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಯ ವಿಡಿಯೋ ರೆಕಾರ್ಡ್‌ ಮಾಡುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ಬೆಂಗಳೂರು: ಬೆಂಗಳೂರಿನ ಇನ್ಫೋಸಿಸ್‌ನ ಕಚೇರಿಯ ಶೌಚಾಲಯದೊಳಗೆ ಮಹಿಳೆಯೊಬ್ಬರ ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ ಟೆಕ್ಕಿಯೊಬ್ಬರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ 28 ವರ್ಷದ ಉದ್ಯೋಗಿ ಸ್ವಪ್ನಿಲ್ ನಾಗೇಶ್ ಮಲಿ ಎಂದು ಗುರುತಿಸಲಾಗಿದೆ.

ನಾಗೇಶ್ ಸ್ವಪ್ನಿಲ್ ಮಲಿ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಯ ವಿಡಿಯೋ ರೆಕಾರ್ಡ್‌ ಮಾಡುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆರೋಪಿ ಪಕ್ಕದ ಶೌಚಾಲಯದ ಕಮೋಡ್‌ ಮೇಲೆ ನಿಂತು ರಹಸ್ಯವಾಗಿ ತನ್ನ ಮೊಬೈಲ್‌ನಲ್ಲಿ ಮಹಿಳಾ ಉದ್ಯೋಗಿಯ ಶೌಚಾಲಯದ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. ಈತ ರೆಕಾರ್ಡ್ ಮಾಡುತ್ತಿರುವುದು ಎದುರುಗಡೆ ಡೋರ್ ಮೇಲೆ ಪ್ರತಿಬಿಂಬ ಮೂಡಿದೆ. ಕೂಡಲೇ ಹೊರ ಬಂದು ನೋಡಿದಾಗ ಯುವತಿ ಮಾತ್ರ ಕಂಡಿದ್ದಾಳೆ. ಮತ್ತೆ ಶೌಚಾಲಯದ ಒಳ ಹೋಗಿ ಆಕೆ ಪರಿಶೀಲನೆ ಮಾಡಿದ್ದಾರೆ. ಆಗ ಮೊಬೈಲ್ ನಲ್ಲಿ ರೆಕಾರ್ಡ್ ಮಾಡುವಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಸ್ವಪ್ನಿಲ್ ನಾಗೇಶ್ ಮಲಿ

ಈ ವೇಳೆ ಮಹಿಳೆ ಕಿರುಚಾಡಿದ್ದು, ಅಲ್ಲಿಯೇ ಮಹಿಳಾ ಉದ್ಯೋಗಿಯ ಕ್ಷಮೆ ಕೇಳಿದ್ದಾನೆ. ಈ ಹಂತದಲ್ಲಿ ಎಚ್‌ಆರ್‌ ಸಿಬ್ಬಂದಿ ಬಂದು ಪರಿಶೀಲನೆ ಮಾಡಿದಾಗ ವಿಡಿಯೋ ಪತ್ತೆಯಾಗಿದೆ. ಸುಮಾರು 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಇದರಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಮಹಿಳೆ ಮಂಗಳವಾರ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದ. ದೂರು ಆಧರಿಸಿ ಇಂದು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಟಿಕ್ಕಿಯನ್ನು ಬಂಧಿಸಿದ್ದಾರೆ.

ತನ್ನ ಪಕ್ಕದ ಶೌಚಾಲಯದ ಕ್ಯುಬಿಕಲ್‌ನಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದಾಗ ನಾಗೇಶ್ ತನ್ನನ್ನು ಚಿತ್ರೀಕರಿಸುತ್ತಿದ್ದರು ಎಂದು ಮಹಿಳೆ ಎಫ್ಐಆರ್ ನಲ್ಲಿ ತಿಳಿಸಿದ್ದಾರೆ.

ಸ್ವಪ್ನಿಲ್ ನಾಗೇಶ್ ಮಲಿ ಇನ್ಫೋಸಿಸ್‌ ಕಂಪನಿಯ ಹೀಲೀಕ್ಸ್‌ ಡಿಪಾರ್ಟ್‌ಮೆಂಟ್‌ನಲ್ಲಿ ಸೀನಿಯರ್‌ ಅಸೋಸಿಯೇಟ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT