ಡಬಲ್ ಬ್ಯಾರೆಲ್ ಗನ್ ಹಿಡಿದು ನಿಂತಿರುವ ನಿವೃತ್ತ ಪೊಲೀಸ್ ಅಧಿಕಾರಿ. 
ರಾಜ್ಯ

ಡಬಲ್ ಬ್ಯಾರೆಲ್ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ಆಟಾಟೋಪ: ಕಾರ್ಮಿಕರಿಗೆ ಬೆದರಿಕೆ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ

ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು, ಏಕಾಏಕಿ ಗನ್ ಹಿಡಿದು ಬಂದು ಲಾರಿ ಚಾಲಕ ಮತ್ತು ಅಲ್ಲೇ ಇದ್ದ ಕಟ್ಟಡ ಕಾರ್ಮಿಕರಿಗೆ ಏರು ದನಿಯಲ್ಲಿ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಡಬಲ್ ಬ್ಯಾರೆಲ್ ಗನ್ ಪ್ರದರ್ಶಿಸಿ ದರ್ಪ ತೋರಿರುವ ಘಟನೆಯೊಂದು ಸದಾಶಿವನಗರದಲ್ಲಿ ಸೋಮವಾರ ನಡೆದಿದೆ.

ತಮ್ಮ ಮನೆಯ ಮುಂದೆ ಕಂಟೈನರ್ ಲಾರಿಯೊಂದು ನಿಧಾನವಾಗಿ ಚಲಿಸಿದ್ದಕ್ಕೆ ಕೆರಳಿದ ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು, ಏಕಾಏಕಿ ಗನ್ ಹಿಡಿದು ಬಂದು ಲಾರಿ ಚಾಲಕ ಮತ್ತು ಅಲ್ಲೇ ಇದ್ದ ಕಟ್ಟಡ ಕಾರ್ಮಿಕರಿಗೆ ಏರು ದನಿಯಲ್ಲಿ ಬೆದರಿಕೆ ಹಾಕಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ ಅವರ ನಿವಾಸದ ಬಳಿಯೇ ಈ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯ ಈ ವರ್ತನೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ಘಟನೆಯನ್ನು ಸ್ಥಳೀಯ ನಿವಾಸಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿದಿದ್ದುಸ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಬಳಿಕ ನಿವೃತ್ತ ಅಧಿಕಾರಿಯ ಗೂಂಡಾಗಿರಿ ವರ್ತನೆಗೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸದಾಶಿವನಗರ ಪೊಲೀಸರು ತಿಳಿಸಿದ್ದು, ಅಧಿಕಾರಿ ಬಂದೂಕನ್ನು ತೆಗೆದುಕೊಂಡು ಹೊರಬಂದಿದ್ದಾರೆ. ಈ ಬಗ್ಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!