ಕರ್ನಾಟಕ MLC ರವಿಕುಮಾರ್ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 
ರಾಜ್ಯ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು

ರವಿಕುಮಾರ್ ವಿರುದ್ಧ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.

ರವಿಕುಮಾರ್ ವಿರುದ್ಧ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ರವಿಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿರುವ ಎನ್ ರವಿಕುಮಾರ್ ಅವರು, "ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ" ಎಂದಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT