ಚಾಮುಂಡೇಶ್ವರಿ ಬೆಟ್ಟದಲ್ಲಿ ಈಡುಗಾಯಿ ಒಡೆದ ಡಿ ಕೆ ಶಿವಕುಮಾರ್  
ರಾಜ್ಯ

'ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ ಎಂಬ ನಂಬಿಕೆ ನನ್ನದು': ತಾಯಿ ಚಾಮುಂಡಿ ಮುಂದೆ ಈಡುಗಾಯಿ ಒಡೆದ ಡಿಕೆಶಿ; Video

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ದುಃಖ, ಕಷ್ಟಗಳನ್ನು ಸಹಿಸುವ ಶಕ್ತಿಯನ್ನು ನೀಡಲಿ, ಈ ಬಾರಿ ಕೂಡ ಇಡೀ ರಾಜ್ಯಕ್ಕೆ ಸಮೃದ್ಧಿ, ಮಳೆ ನೀಡಿ ತಾಯಿ ಚಾಮುಂಡಿ ಶಕ್ತಿ ನೀಡಲಿ ಎಂದರು.

ಮೈಸೂರು/ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ತಮ್ಮ ಕುಟುಂಬಸ್ಥರ ಜೊತೆ ಇಂದು ಆಷಾಢ ಮಾಸದ ಎರಡನೇ ಶುಕ್ರವಾರ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿ ಈಡುಗಾಯಿ ಒಡೆದರು.

ಡಿ ಕೆ ಶಿವಕುಮಾರ್ ತಮ್ಮ ಪತ್ನಿ ಹಾಗೂ ಮಗಳೊಂದಿಗೆ ಬೆಟ್ಟದ ಮೇಲೆ ಬಂದಾಗ ದೇವಸ್ಥಾನದ ಆಡಳಿತ ಮಂಡಳಿ ಅವರಿಗೆ ಪುಷ್ಪಮಾಲೆ ಮತ್ತು ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ಸ್ವಾಗತಿಸಿತು. ಅವರು ನಿನ್ನೆ ನಂದಿ ಹಿಲ್ಸ್ ಕೆಳಭಾಗದಲ್ಲಿ ಭೋಗನಂದೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದ ಶಿವಕುಮಾರ್ ಚಾಮುಂಡಿ ಬೆಟ್ಟದಲ್ಲಿ ಇಂದು ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ದುಃಖ, ಕಷ್ಟಗಳನ್ನು ಸಹಿಸುವ ಶಕ್ತಿಯನ್ನು ನೀಡಲಿ, ಈ ಬಾರಿ ಕೂಡ ಇಡೀ ರಾಜ್ಯಕ್ಕೆ ಸಮೃದ್ಧಿ, ಮಳೆ ನೀಡಿ ತಾಯಿ ಚಾಮುಂಡಿ ಶಕ್ತಿ ನೀಡಲಿ, ನಾವು ಏನೇ ಕೆಲಸ ಮಾಡಬೇಕಾದರೂ ತಾಯಿಯಲ್ಲಿ ಪ್ರಾರ್ಥನೆ ಮಾಡಿಕೊಂಡು ಮುಂದುವರಿಸಿದ್ದೇವೆ. ಇವತ್ತು ಕೂಡ ನಾನು ನನ್ನ ಕುಟುಂಬ ಸಮೇತ ಬಂದು ತಾಯಿ ದರ್ಶನ ಮಾಡಿ ರಾಜ್ಯದ ಜನತೆಗೆ, ನನಗೆ, ನನ್ನ ಕುಟುಂಬಕ್ಕೆ ಶುಭವಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.

ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅನ್ನೋದು ನನ್ನ ನಂಬಿಕೆ, ನನಗೆ ಏನೇನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ, ಇಲ್ಲಿ ರಾಜಕೀಯ ಬಗ್ಗೆ ಮಾತನಾಡಲು ನಾನು ಬಂದಿಲ್ಲ, ಯಾವ ಚರ್ಚೆಯೂ ಬೇಡ, ರಾಜ್ಯಕ್ಕೆ ಒಳ್ಳೆದಾಗಲಿ, ಮಲ್ಲಿಕಾರ್ಜುನ ಖರ್ಗೆಯವರು ನಮ್ಮ ಪಕ್ಷದ ಅಧ್ಯಕ್ಷರು ಅವರು ನಮ್ಮೆಲ್ಲರಿಗೂ ಬುದ್ದಿವಾದ ಹೇಳಿದ್ದಾರೆ, ಸಂದೇಶ ಕೊಟ್ಟಿದ್ದಾರೆ. ಅವರ ಮಾತಿನಂತೆ ನಡೆದುಕೊಂಡು ಎಲ್ಲರೂ ಒಟ್ಟುಸೇರಿ ಕೆಲಸ ಮಾಡೋಣ ಎಂದರು.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದವನ್ನು ಉಲ್ಲೇಖಿಸಿ, ಈ ವರ್ಷದ ಕೊನೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವ ಸಾಧ್ಯತೆಯ ಬಗ್ಗೆ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಕೆಲವು ಸಮಯದಿಂದ ಊಹಾಪೋಹಗಳು ಕೇಳಿಬರುತ್ತಿವೆ.

ಆದರೆ, ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಸಿದ್ದರಾಮಯ್ಯ ಮೊನ್ನೆ ಹೇಳಿಕೆ ನೀಡಿದ ಬೆನ್ನಲ್ಲೇ ಮಾತನಾಡಿದ್ದ ಡಿ ಕೆ ಶಿವಕುಮಾರ್, ತಮ್ಮ ಯಾವುದೇ ಅಭ್ಯಂತರವಿಲ್ಲ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದರು.

ತಮಗೆ ಬೇರೆ ಆಯ್ಕೆ ಇಲ್ಲ, ಹೈಕಮಾಂಡ್ ನಿರ್ದೇಶನಗಳನ್ನು ಪಾಲಿಸುವುದಾಗಿ ಹೇಳಿದರು.

ಮೇ 2023 ರಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಸಿಎಂ ಹುದ್ದೆಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಡಿ ಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT