ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಭೂಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಇಂದು ಫ್ರೀಡಂ ಪಾರ್ಕ್​​ನಲ್ಲಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಈಶ್ವರ್ ಬಂದಿದ್ದರು.

ಬೆಂಗಳೂರು: ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೆಜೆಸ್ಟಿಕ್‌ನ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇಂದು ನಡೆದಿದೆ. ಗುಂಡ್ಲುಪೇಟೆಯ ಕುರುಬರಹುಂಡಿ ಮೂಲದ ರೈತ ಈಶ್ವರ್ (50) ಮೃತ ದುರ್ದೈವಿ.

ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಭೂಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಇಂದು ಫ್ರೀಡಂ ಪಾರ್ಕ್​​ನಲ್ಲಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಈಶ್ವರ್ ಬಂದಿದ್ದರು.

ರೈಲಿನ ಮೂಲಕ ಬಂದಿಳಿದಿದ್ದ ಈಶ್ವರ್, ಪ್ರತಿಭಟನಾ ಸ್ಥಳಕ್ಕೆ ತೆರಳುವ ಮಾರ್ಗಮಧ್ಯೆ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಕುಸಿದು ಬಿದ್ದಿದ್ದರು.

ತಕ್ಷಣ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಈಶ್ವರ್ ಸಾವನ್ನಪ್ಪಿದ್ದಾರೆ. ಈಶ್ವರ್ ಸಾವಿಗೆ ನಿಖರವಾದ ಕಾರಣ ತಿಳಿಯಲು ಪೊಲೀಸರು ವೈದ್ಯರ ವರದಿಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್, ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

West Asia war: ಇರಾನ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿ ‘ಸೋಲೋ ಆಪರೇಷನ್’; ಅಮೆರಿಕಾ ಪಾತ್ರವಿಲ್ಲ- ಇಸ್ರೇಲ್ ಸ್ಪಷ್ಟನೆ

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಪಾಪಣ್ಣ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

ದೇವೇಗೌಡರು- ಕುಮಾರಸ್ವಾಮಿ ಅವರಿಗೆ ವಿಶಾಲ ಹೃದಯ ಇರಲಿಲ್ಲ: ಅವರನ್ನು ಪಿಎಂ- ಸಿಎಂ ಮಾಡಿದ್ದು ನಮ್ಮ ಪಕ್ಷ; ಡಿ.ಕೆ‌. ಶಿವಕುಮಾರ್

SCROLL FOR NEXT