ಲೋಕಾಯುಕ್ತ ಕಚೇರಿ  
ರಾಜ್ಯ

ಲೋಕಾಯುಕ್ತ ಅಧಿಕಾರಿ ಅಕ್ರಮ ಸಾಬೀತು! 'ಬೇಲಿಯೇ ಎದ್ದು ಹೊಲ ಮೇಯ್ದರೆ' ರಕ್ಷಿಸೋರು ಯಾರು?

ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಮತ್ತು ಪೊಲೀಸ್ ಪೇದೆ ನಿಂಗಪ್ಪ ಅವರು ಅಬಕಾರಿ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿರುವ ಆರೋಪ ಲೋಕಾಯುಕ್ತ ಹೇಳಿಕೆಯಲ್ಲಿ ಬಹಿರಂಗವಾಗಿದೆ.

ಬೆಂಗಳೂರು: 'ಬೇಲಿಯೇ ಎದ್ದು ಹೊಲ ಮೇಯ್ದಂತೆ' ಭ್ರಷ್ಟಾಚಾರ ತಡೆಯಬೇಕಿದ್ದ ಲೋಕಾಯುಕ್ತ ಸಂಸ್ಥೆಯ ಇಬ್ಬರು ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಿರುವುದು ಹಾಗೂ ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಮತ್ತು ಪೊಲೀಸ್ ಪೇದೆ ನಿಂಗಪ್ಪ ಅವರು ಅಬಕಾರಿ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿರುವ ಆರೋಪ ಲೋಕಾಯುಕ್ತ ಹೇಳಿಕೆಯಲ್ಲಿ ಬಹಿರಂಗವಾಗಿದೆ. ಇವರು 'ಕೆಜಿ' ಎಂಬ ಕೋಡ್‌ವರ್ಡ್ ಬಳಸಿ ಲಂಚ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.

ಶ್ರೀನಾಥ್ ಜೋಶಿ ಅವರು ಲಂಚದ ಹಣವನ್ನು ಕ್ರಿಪ್ಟೋಕರೆನ್ಸಿ ಮೂಲಕ ವೈಟ್ ಮನಿಯನ್ನಾಗಿ ಪರಿವರ್ತಿಸಲು ಪ್ರಯತ್ನಿಸಿದರು ಎಂದು ತನಿಖೆಯಿಂದ ತಿಳಿದುಬಂದಿದೆ. ಅವರು 24 ಕ್ರಿಪ್ಟೋ ಖಾತೆಗಳನ್ನು ತೆರೆದಿದ್ದಾರೆ. ಈ ಪೈಕಿ 13 ಖಾತೆಗಳಲ್ಲಿ ಈಗಾಗಲೇ 4 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆದಿದೆ ಎಂದು ಆರೋಪಿಸಲಾಗಿದೆ. ಈ ಕುರಿತ ತನಿಖೆ ನಡೆಯುತ್ತಿದೆ ಎಂದು ಲೋಕಾಯುಕ್ತರು ಖಚಿತಪಡಿಸಿದ್ದಾರೆ.

ಈ ಘಟನೆಯು ಲೋಕಾಯುಕ್ತದಲ್ಲಿಯೇ ಆಂತರಿಕ ಭ್ರಷ್ಟಾಚಾರದ ಬಗ್ಗೆ ಕಳವಳವನ್ನು ಉಂಟುಮಾಡಿದೆ. ಈ ಹಿಂದೆ ಲೋಕಾಯುಕ್ತವು ತನ್ನದೇ ಸಿಬ್ಬಂದಿಯ ಮೇಲೆ ನಿಗಾ ಇಡಲು ಮೀಸಲಾದ 24 ಸದಸ್ಯರ ಜಾಗೃತ ದಳವನ್ನು ರಚಿಸುವಂತೆ ಮನವಿ ಮಾಡಿತ್ತು. ಆದರೆ ಈ ಮನವಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿತ್ತು.

ಭ್ರಷ್ಟಾಚಾರ ನಿಗ್ರಹ ದಳದಿಂದ ಲೋಕಾಯುಕ್ತಕ್ಕೆ ಈ ಹಿಂದೆ ವರ್ಗಾವಣೆಗೊಂಡ ಸಿಬ್ಬಂದಿಯನ್ನು ಬಳಸಿಕೊಂಡು ಆಂತರಿಕ ಕಣ್ಗಾವಲು ಕಾರ್ಯವಿಧಾನವನ್ನು ಪುನರ್ ರಚಿಸಲು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸರ್ಕಾರ ಈಗ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್