ಗಾಳಿಯಲ್ಲಿ ಗುಂಡು ಹಾರಿಸಿದ ಸಂತೋಷ್ ಜಾರಕಿಹೊಳಿ 
ರಾಜ್ಯ

Gokak: ಪೊಲೀಸರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ Ramesh Jarkiholi ಪುತ್ರ; FIR ದಾಖಲು..; Video Viral

ಬೆಳಗಾವಿ ಜಿಲ್ಲೆಯ ಗೋಕಾಕ್​ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ್ದ ಸಂತೋಷ್ ಜಾರಕಿಹೊಳಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಬೆಳಗಾವಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್​ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ್ದ ಸಂತೋಷ್ ಜಾರಕಿಹೊಳಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಸಂತೋಷ್ ಈ ಮೊಂಡಾಟ ಮೆರೆದಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ್​ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಜಾತ್ರೆಯಲ್ಲಿ ನೂರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ.

FIR ದಾಖಲು

ಘಟನೆ ಸಂಬಂಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದ್ದು ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಂತೆಯೇ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ ಸಂಬಂಧ ಸಂತೋಷ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಾಗಿದ್ದು, FIR ದಾಖಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್