ನಟಿ ರನ್ಯಾ ರಾವ್ 
ರಾಜ್ಯ

Gold Smuggling Case: ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ!

2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.

ಬೆಂಗಳೂರು: ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ. ಡಿಆರ್ ಐ ದೂರಿನ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್ ದಾಖಲಿಸಿದ ನಂತರ ಇಡಿ ತನಿಖೆ ಪ್ರಾರಂಭಿಸಿತು.

ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.92 ಕೋಟಿ ಮೌಲ್ಯದ 21.28 ಕೆಜಿ ಚಿನ್ನ ಕಳ್ಳಸಾಗಣೆಯೊಂದಿಗೆ ಇಬ್ಬರು ವಿದೇಶಿ ಪ್ರಜೆಗಳನ್ನು ಡಿಆರ್‌ಐ ತಡೆದ ನಂತರ ಪ್ರಕರಣ ಬೆಳಕಿಗೆ ಬಂದಿತು. ರನ್ಯಾ ರಾವ್‌ ಅವರನ್ನು ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ ಹಿಂದಿರುಗುವ ಸಂದರ್ಭ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಡಿಆರ್‌ಐ ಅಧಿಕಾರಿಗಳು ರನ್ಯಾರಿಂದ 14.2 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ತದನಂತರ ಆಕೆಯ ನಿವಾಸದಲ್ಲಿ ಶೋಧ ನಡೆಸಿದಾಗ ಲೆಕ್ಕಕ್ಕೆ ಸಿಗದ 2.67 ಕೋಟಿ ರೂಪಾಯಿ ನಗದು ಮತ್ತು 2.06 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ತನಿಖೆ ವೇಳೆ ತನ್ನ ಸಹಚರ ತರುಣ್ ಕೊಂಡೂರು ರಾಜು ಮತ್ತು ಇತರರೊಂದಿಗೆ ಶಾಮೀಲಾಗಿ ದುಬೈ, ಉಗಾಂಡಾ ಮತ್ತು ಇತರ ಸ್ಥಳಗಳಿಗೆ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಮಾಡಿರುವುದು ತಿಳಿದುಬಂದಿತ್ತು. ಇಲ್ಲಿಯವರೆಗೆ ಇಡಿ ಒಟ್ಟು ರೂ. 55.62 ಕೋಟಿಯಷ್ಟು ಅಕ್ರಮ ಆದಾಯವನ್ನು ತಿಳಿಸಿದೆ.

ರನ್ಯಾ ರಾವ್ ಅವರಿಗೆ ಸೇರಿದ ಬೆಂಗಳೂರಿನ ವಿಕ್ಟೋರಿಯಾ ಲೇಔಟ್‌ನಲ್ಲಿರುವ ಒಂದು ಮನೆ, ಅರ್ಕಾವತಿ ಲೇಔಟ್‌ನಲ್ಲಿರುವ ಒಂದು ಪ್ಲಾಟ್, ತುಮಕೂರಿನ ಕೈಗಾರಿಕಾ ಭೂಮಿ ಮತ್ತು ಆನೇಕಲ್‌ನಲ್ಲಿ ಕೃಷಿ ಭೂಮಿಯನ್ನು PMLA ನ ಸೆಕ್ಷನ್ 5(1) ಅಡಿಯಲ್ಲಿ ಜಪ್ತಿ ಮಾಡಿದೆ. ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಮತ್ತು ಸಿಂಡಿಕೇಟ್‌ನಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸಲು ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಇಡಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT