ಹೆಲ್ಮೆಟ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ bengalurupost
ರಾಜ್ಯ

ಬೆಂಗಳೂರಿನ ಹೆಲ್ಮೆಟ್​ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: ಭಾರಿ ದಂಡ!

ನಿಷೇಧ ಇದ್ದರೂ ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ RTO ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಆಟೋಗಳ ಮೇಲೆ ಮುಗಿಬಿದ್ದಿದ್ದ ಅಧಿಕಾರಿಗಳು ಇದೀಗ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ.

ಬೆಂಗಳೂರು ನಗರ ಸಂಚಾರಿ ಪೊಲೀಸರು (Bengaluru Traffic Police), ಆರ್​ಟಿಓ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ (Helmet) ಅಂಗಡಿ ಮತ್ತು ಮಳಿಗೆಗಳ ಮೇಲೆ ದಾಳಿ ಮಾಡಿದರು. ನಿಷೇಧ ಇದ್ದರೂ ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಅಧಿಕಾರಿಗಳು ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿ ಕಳಪೆ ಗುಣಮಟ್ಟದ ಹೆಲ್ಮೆಟ್ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ.

ಮೂಲಗಳ ಪ್ರಕಾರ ನಗರದ 19 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ ಆರು ಅಂಗಡಿಗಳಿಗೆ 50,000 ರೂ. ದಂಡ ವಿಧಿಸಲಾಗಿದೆ ಮತ್ತು ನೋಟೀಸ್ ಜಾರಿ ಮಾಡಲಾಗಿದೆ. ಕಳಪೆ ಹೆಲ್ಮೆಟ್ ಧರಿಸಿದ 38 ಬೈಕ್ ಸವಾರರಿಗೂ ದಂಡ ವಿಧಿಸಲಾಗಿದೆ. ISI ಮಾರ್ಕ್ ಇಲ್ಲದ ಅಥವಾ ಅರ್ಧ ಹೆಲ್ಮೆಟ್ ಧರಿಸುವುದು ಅಪಾಯಕಾರಿ ಮತ್ತು ಕಾನೂನುಬಾಹಿರ ಎಂದು ಎಚ್ಚರಿಸಲಾಗಿದೆ.

ನಗರದ ಸಿದ್ಧಯ್ಯ ರಸ್ತೆ, ಕಲಾಸಿಪಾಳ್ಯ ರಸ್ತೆ, ಲಾಲ್ ಬಾಗ್ ರಸ್ತೆ, ಮಾಗಡಿ ರಸ್ತೆ, ಸುಮನಹಳ್ಳಿ, ವಿಜಯನಗರ, ಅಗ್ರಹಾರ ದಾಸರಹಳ್ಳಿ, ನಾಗರಭಾವಿ, ಔಟರ್ ರಿಂಗ್ ರಸ್ತೆ ಸೇರಿದಂತೆ ಒಟ್ಟು 19 ಸ್ಥಳಗಳಲ್ಲಿ ಬೆಂಗಳೂರು ಸಂಚಾರ ಪೊಲೀಸರು, ಆರ್‌ಟಿಓ ಮತ್ತು ಮಾಪನ ಇಲಾಖೆ ಅಧಿಕಾರಿಗಳು ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್‌ಗಳ ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.

50 ಸಾವಿರ ರೂ. ದಂಡ

ಕಳಪೆ ಗುಣಮಟ್ಟದ ಮತ್ತು ಅರ್ಧ ಹೆಲ್ಮೆಟ್​ ಮಾಡುತ್ತಿದ್ದ ಆರು ಅಂಗಡಿಗಳಿಗೆ ಮಾಪನ ಇಲಾಖೆ 50 ಸಾವಿರ ರೂ. ದಂಡ ವಿಧಿಸಿದೆ. ಜೊತೆಗೆ, ದಿ ಲೀಗಲ್ ಮೆಟ್ರಾಲಜಿ ಕಾಯ್ದೆ (ಮಾಪನಶಾಸ್ತ್ರ ಕಾಯ್ದೆ) ಅಡಿ ನೋಟಿಸ್ ನೀಡಿದೆ. 13 ಅಂಗಡಿ ಮಾಲೀಕರಿಗೆ ಕೋರ್ಟ್​ನಲ್ಲಿ ದಂಡ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ ಅಧಿಕಾರಿಗಳು ಕಳಪೆ ಹಾಗೂ ಅರ್ಧ ಹೆಲ್ಮೆಟ್​ಗಳನ್ನು ಜಪ್ತಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT