ಪಿಎಸ್ ಐ ನಾಗರಾಜಪ್ಪ 
ರಾಜ್ಯ

ತುಮಕೂರು: ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ದಾವಣಗೆರೆ PSI ನೇಣಿಗೆ ಶರಣು!

ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದರು. ರೂಮ್‍ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದ್ರೂ ಅವರು ಕರೆ ಸ್ವೀಕರಿಸಿರಲಿಲ್ಲ.

ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು.

ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದ ನಾಗರಾಜಪ್ಪ, ರೂಮ್‍ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದ್ರೂ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಲಾಡ್ಜ್‌ನಲ್ಲಿ ದುರ್ವಾಸನೆ ಬಂದಾಗ, ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು. ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ತದನಂತರ ಸುದ್ದಿ ತಿಳಿದು ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಅವರು ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹುಳಗಳಾಗಿದ್ದವು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡ ರೂಮ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. 2 ಪುಟಗಳ ಡೆತ್ ನೋಟ್ ನಲ್ಲಿ `ನನ್ನ ಸಾವಿಗೆ ನಾನೇ ಕಾರಣ’. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಅಲ್ಲದೇ ಹೋಟೆಲ್ ಮಾಲೀಕರಿಗೂ ಡೆತ್‍ನೋಟ್‍ನಲ್ಲಿ ಕ್ಷಮೆ ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ