ಸಾಂದರ್ಭಿಕ ಚಿತ್ರ 
ರಾಜ್ಯ

ಇಬ್ಬರು ಅಪ್ರಾಪ್ತರಿಗೆ ಕಿರುಕುಳ; ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಇಬ್ಬರ ಬಂಧನ

ಅಪ್ರಾಪ್ತರಲ್ಲಿ ಒಬ್ಬರ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪಟ್ಟಣದಲ್ಲಿ ಇಬ್ಬರು ಅಪ್ರಾಪ್ತರಿಗೆ ಕಿರುಕುಳ ನೀಡಿ, ಕೋಮುವಾದಿ ಹೇಳಿಕೆಗಳಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಅಪ್ರಾಪ್ತರಲ್ಲಿ ಒಬ್ಬರ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಜುಲೈ 5 ರಂದು ಪುತ್ತೂರು ಕಸಬಾ ಗ್ರಾಮದ ಬೀರಮಲೆ ಬೆಟ್ಟದ ಬಳಿ ದೂರುದಾರರ ಮಗ ಮತ್ತು ಆತನಿಗೆ ಪರಿಚಿತವಾಗಿರುವ ಹುಡುಗಿಯ ಜೊತೆ ಕುಳಿತಿದ್ದಾಗ ಆರೋಪಿಗಳು ಬಂದಿದ್ದಾರೆ. ಇಬ್ಬರೂ ಅಪ್ರಾಪ್ತರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ವಿಡಿಯೋ ರೆಕಾರ್ಡ್ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಸ್ಥಳೀಯರ ಸಮ್ಮುಖದಲ್ಲೇ ಆರೋಪಿಗಳು ಸಂತ್ರಸ್ತರ ವಿಡಿಯೋ ಚಿತ್ರೀಕರಿಸಲು ಮುಂದಾಗಿದ್ದಾರೆ ಮತ್ತು ನಂತರ ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಂ ಮೂಲಕ ಕೋಮುವಾದಿ ಹೇಳಿಕೆಗಳೊಂದಿಗೆ ಪ್ರಸಾರ ಮಾಡಿದ್ದಾರೆ ಎಂದು ಅವರು ಹೇಳಿದರು.

ತನಿಖೆಯ ನಂತರ, ಪುರುಷೋತ್ತಮ್ (43) ಮತ್ತು ರಾಮಚಂದ್ರ (38) ಎಂಬುವವರನ್ನು ಬಂಧಿಸಲಾಗಿದೆ.

ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!