ಯಾದಗಿರಿ: ಜಿಲ್ಲೆಯ ತಿಪ್ಪನಡಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ನಂತರ ಅತಿಸಾರ ಮತ್ತು ವಾಂತಿಯ ಲಕ್ಷಣಗಳಿಂದಾಗಿ ಕಳೆದ ಒಂದು ವಾರದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಐದು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಆದಾಗ್ಯೂ, ಮೃತರು ಇತರ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಅವರ ಸಾವುಗಳು ನೀರಿನ ಮಾಲಿನ್ಯಕ್ಕೆ ನೇರವಾಗಿ ಸಂಬಂಧಿಸಿಲ್ಲ ಎಂದು ಯಾದಗಿರಿಯ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅತಿಸಾರ ಮತ್ತು ವಾಂತಿಯ ಲಕ್ಷಣಗಳಿರುವ ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಈಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು.
ಆರೋಗ್ಯ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.