ಜಿ ಪರಮೇಶ್ವರ 
ರಾಜ್ಯ

ರಾಜ್ಯದಿಂದ 200 ಅಕ್ರಮ ಬಾಂಗ್ಲಾದೇಶಿಗಳ ಗಡಿಪಾರು: ಡಾ. ಜಿ ಪರಮೇಶ್ವರ

ಪ್ರಾದೇಶಿಕ ನೋಂದಣಿ ಕಚೇರಿಯ ಅಧಿಕಾರಿಗಳು ಅಂತಹ ಅಕ್ರಮ ವಲಸಿಗರನ್ನು ಗುರುತಿಸಿ ಪೊಲೀಸರಿಗೆ ತಿಳಿಸುತ್ತಾರೆ ಎಂದು ಅವರು ಹೇಳಿದರು. ನಾವು ನಿರ್ಮಾಣ ಕಾರ್ಮಿಕರ ಮೇಲೆ ನಿಗಾ ಇಡುತ್ತಿದ್ದೇವೆ.

ಬೆಂಗಳೂರು: ಕಳೆದ ಕೆಲವು ತಿಂಗಳುಗಳಲ್ಲಿ 200 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ರಾಜ್ಯದಿಂದ ಗಡೀಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಇಂತಹ ಅನೇಕ ವಲಸಿಗರ ವಿರುದ್ಧ ದೂರುಗಳು ಬಂದಿವೆ ಎಂದರು. ರಾಜ್ಯ ಸರ್ಕಾರವು ಅಕ್ರಮ ವಲಸಿಗರನ್ನು ತಕ್ಷಣ ಗಡೀಪಾರು ಮಾಡಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದು ನಿರಂತರ ಪ್ರಕ್ರಿಯೆ ಎಂದು ತಿಳಿಸಿದ್ದಾರೆ.

ಪ್ರಾದೇಶಿಕ ನೋಂದಣಿ ಕಚೇರಿಯ ಅಧಿಕಾರಿಗಳು ಅಂತಹ ಅಕ್ರಮ ವಲಸಿಗರನ್ನು ಗುರುತಿಸಿ ಪೊಲೀಸರಿಗೆ ತಿಳಿಸುತ್ತಾರೆ ಎಂದು ಅವರು ಹೇಳಿದರು. "ನಾವು ನಿರ್ಮಾಣ ಕಾರ್ಮಿಕರ ಮೇಲೆ ನಿಗಾ ಇಡುತ್ತಿದ್ದೇವೆ... ಅವರು ಅಕ್ರಮ ವಲಸಿಗರೆಂದು ಕಂಡುಬಂದರೆ, ಅವರನ್ನು ಗಡೀಪಾರು ಮಾಡಲಾಗುತ್ತದೆ ಎಂದರು.

ಸರ್ಕಾರ ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತಳೆಯುವುದಿಲ್ಲ. ಕಾಂಗ್ರೆಸ್ ಅಂತಹ ಅಕ್ರಮ ವಲಸಿಗರನ್ನು ಮತಬ್ಯಾಂಕ್ ಆಗಿ ಬಳಸುತ್ತದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ, ಡಾ. ಪರಮೇಶ್ವರ್, ಚುನಾವಣೆಯಲ್ಲಿ ಗೆಲ್ಲಲು ಅಕ್ರಮ ವಲಸಿಗರ ಮತಗಳ ಅಗತ್ಯವಿರುವ ಪರಿಸ್ಥಿತಿಯಲ್ಲಿ ಪಕ್ಷ ಎಂದಿಗೂ ಇರಲಿಲ್ಲ ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT