ಪಿ. ರಾಜೀವ್  
ರಾಜ್ಯ

RDPR ಇಲಾಖೆಯಲ್ಲಿ 1000 ಕೋಟಿ ರೂ ಭ್ರಷ್ಟಾಚಾರ: BJP ಆರೋಪ

ಪ್ರಿಯಾಂಕ್ ಖರ್ಗೆ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅನೇಕ ಸಂದರ್ಭಗಳಲ್ಲಿ, ಕೈಗೆತ್ತಿಕೊಳ್ಳದ ಕೆಲಸಗಳಿಗೆ ಹಣವನ್ನು ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮನ್ರೇಗಾ ಅಡಿಯಲ್ಲಿ ವಿವಿಧ ಕಾಮಗಾರಿಗಳು ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ 1,000 ಕೋಟಿ ರೂಪಾಯಿಗಳಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಬಗ್ಗೆ ಮಂಗಳವಾರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆರೋಪಿಸಿದರು. ಇದೇ ವೇಳೆ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನು ಬಿಡುಗಡೆ ಮಾಡಿದರು.

ಪ್ರಿಯಾಂಕ್ ಖರ್ಗೆ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅನೇಕ ಸಂದರ್ಭಗಳಲ್ಲಿ, ಕೈಗೆತ್ತಿಕೊಳ್ಳದ ಕೆಲಸಗಳಿಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಕುಡಚಿ ವಿಧಾನಸಭಾ ಕ್ಷೇತ್ರದ ಒಂದು ಗ್ರಾಮ ಪಂಚಾಯಿತಿಯಲ್ಲಿ 17 ಕೋಟಿ ರೂಪಾಯಿಗಳ ಅಕ್ರಮಗಳು ನಡೆದಿವೆ. ರಾಜ್ಯದಲ್ಲಿ 6,000 ಗ್ರಾಮ ಪಂಚಾಯಿತಿಗಳಿದ್ದು, ಅಲ್ಲಿನ ಭ್ರಷ್ಟಾಚಾರದ ಪ್ರಮಾಣವನ್ನು ನೀವೇ ಊಹಿಸಬಹುದು ಎಂದು ಹೇಳಿದರು.

ವಿವಿಧ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಹಣವನ್ನು ಬಿಡುಗಡೆ ಮಾಡಲು ಒಂದೇ ವ್ಯಕ್ತಿಗಳ ಛಾಯಾಚಿತ್ರಗಳನ್ನು ವಿಭಿನ್ನ ಹೆಸರುಗಳಲ್ಲಿ ಬಳಸಲಾಗಿದೆ. "ಪ್ರಿಯಾಂಕ್ ಖರ್ಗೆ ಅವರೇ (ಆರ್‌ಡಿಪಿಆರ್ ಸಚಿವರೇ) ನಿಮ್ಮ ಇಲಾಖೆಯಲ್ಲಿ ಏನು ಮಾಡುತ್ತಿದ್ದೀರಿ? ನಿಮ್ಮ ಅನುಮೋದನೆ ಇಲ್ಲದೆ ಇದು ನಡೆಯುತ್ತಿದೆಯೇ ಅಥವಾ ಭ್ರಷ್ಟಾಚಾರದಲ್ಲಿ ನಿಮ್ಮ ಪಾಲೂ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ನಾನು ಮಾಡುತ್ತಿರುವ ಆರೋಪಕ್ಕೆ ನನ್ನ ಬಳಿ ದಾಖಲೆಗಳಿವೆ. ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಲಾಗಿದೆ. ಅಂತರರಾಷ್ಟ್ರೀಯ ರಾಜಕೀಯದ ಬಗ್ಗೆ ಆಗಾಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆ, ತಮ್ಮ ಇಲಾಖೆಯಲ್ಲಿನ ಅಕ್ರಮಗಳ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಬಿಹಾರದಲ್ಲಿ ಚುನಾವಣೆಗೆ ಹಣ ಹೊಂದಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಾಗ್ಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT