ಸಾಂದರ್ಭಿಕ ಚಿತ್ರ 
ರಾಜ್ಯ

ಮಕ್ಕಳ ನಾಪತ್ತೆ-ಕಳ್ಳಸಾಗಣೆ ಪತ್ತೆಗೆ ವಿಶೇಷ ಕಾರ್ಯಪಡೆ ರಚನೆ

ರಾಜ್ಯದಲ್ಲಿ ಹಲವಾರು ಮಕ್ಕಳನ್ನು ಅಪಹರಿಸುವ ಮತ್ತು ಕಾಣೆಯಾಗುವ ಪ್ರಕರಣಗಳು ವರದಿಯಾಗಿವೆ. ಅಂತಹ ಪ್ರಕರಣಗಳು ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರು: ಮಕ್ಕಳ ಕಳ್ಳಸಾಗಣೆ ಮತ್ತು ನಾಪತ್ತೆ ಪ್ರಕರಣಗಳ ಬಗ್ಗೆ ಕಳವಳಗಳು ಹೆಚ್ಚಾಗುತ್ತಿದ್ದು, ಇದರ ಬೆನ್ನಲ್ಲೇ ಕಾಣೆಯಾದ ಮತ್ತು ಅಪಹರಿಸಲ್ಪಟ್ಟ ಮಕ್ಕಳ ಪತ್ತೆಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಾಪಡೆಗಳನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ.

ಜೂನ್ 20 ರಂದು ನಡೆದ ಸಭೆಯಲ್ಲಿ ಈ ಮಕ್ಕಳ ನಾಪತ್ತೆ ಹಾಗೂ ಕಳ್ಳಸಾಗಣೆ ವಿಚಾರ ಪ್ರಸ್ತಾಪವಾಗಿತ್ತು. ಶಾಸಕಾಂಗ ಸಮಿತಿಯ ಸೂಚನೆ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ.

ರಾಜ್ಯದಲ್ಲಿ ಹಲವಾರು ಮಕ್ಕಳನ್ನು ಅಪಹರಿಸುವ ಮತ್ತು ಕಾಣೆಯಾಗುವ ಪ್ರಕರಣಗಳು ವರದಿಯಾಗಿವೆ. ಅಂತಹ ಪ್ರಕರಣಗಳು ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ಬೆಳವಣಿಗೆಯನ್ನು ತಡೆಗಟ್ಟಲು ಮತ್ತು ದುರ್ಬಲ ಮಕ್ಕಳನ್ನು ರಕ್ಷಿಸಲು ಸಂಘಟಿತ ಮತ್ತು ಜವಾಬ್ದಾರಿಯುತ ಪ್ರತಿಕ್ರಿಯೆಯನ್ನು ಖಚಿತಪಡಿಸಿಕೊಳ್ಳುವುದು ಈ ಕಾರ್ಯಪಡೆಯ ಗುರಿಯಾಗಿದೆ.

ಜಿಲ್ಲೆಗಳ ಪೊಲೀಸ್ ಮುಖ್ಯಸ್ಥರು ಈ ಕಾರ್ಯಪಡೆಯ ಅಧ್ಯಕ್ಷರಾಗಿರುತ್ತಾರೆ ವಿವಿಧ ಇಲಾಖೆಗಳಿಂದ 10 ಸದಸ್ಯರು ಕಾರ್ಯಪಡೆಯಲ್ಲಿರಲಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಮಕ್ಕಳ ಅಪಹರಣ ಮತ್ತು ಕಾಣೆಯಾದ ಮಕ್ಕಳ ಪ್ರಕರಣಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯಪಡೆ ಪ್ರತಿ ತಿಂಗಳು ಸಭೆ ಸೇರಲಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು ಪ್ರತಿ ತಿಂಗಳ ಅಂತ್ಯದೊಳಗೆ ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ವರದಿಗಳನ್ನು ಕಡ್ಡಾಯ ಸಲ್ಲಿಸಬೇಕಾಗುತ್ತದೆ.

ಸಭೆಗಳ ಸಮಯದಲ್ಲಿ ಕಾರ್ಯಪಡೆಯು ಕಾಣೆಯಾದ ಮಕ್ಕಳ ಪೋಷಕರನ್ನು ಕರೆಸಿ, ಮಕ್ಕಳನ್ನು ಪತ್ತೆಹಚ್ಚಲು ಸಹಾಯ ಮಾಡುವ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಬೇಕು. ಈ ಕಾರ್ಯಪಡೆಯು ಬಾಧಿತ ಕುಟುಂಬಗಳಿಗೆ ಸಮಾಲೋಚನೆ, ನೈತಿಕ ಬೆಂಬಲ ಮತ್ತು ಮಾನಸಿಕ ನೆರವು ನೀಡುವ ಜವಾಬ್ದಾರಿಯನ್ನು ಹೊಂದಿದೆ.

ಹಲವಾರು ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಪ್ರಕರಣಗಳನ್ನು ಪರಿಹರಿಸಲು ವಿವಿಧ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ, ಜಿಲ್ಲಾ ಮಟ್ಟದ ವಿಶೇಷ ಅಭಿಯಾನಗಳನ್ನು ಪ್ರಾರಂಭಿಸೂೇಕು ಮತ್ತು ಮೇಲ್ವಿಚಾರಣೆ ಮಾಡಬೇಕೆಂದು ತಿಳಿಸಲಾಗಿದೆ.

ಸ್ವಸಹಾಯ ಗುಂಪುಗಳು ಮತ್ತು ಸ್ಥಳೀಯ ಸಮುದಾಯಗಳನ್ನು ಒಳಗೊಂಡ ಜಾಗೃತಿ ಕಾರ್ಯಕ್ರಮಗಳನ್ನು ಸಹ ಕಾರ್ಯಪಡೆ ಆಯೋಜಿಸುತ್ತದೆ. ಮಕ್ಕಳ ಅಪಹರಣ ಮತ್ತು ಕಳ್ಳಸಾಗಣೆ ಹಿಂದಿನ ಕಾರಣಗಳ ಕುರಿತು ವಿವರವಾದ ವಿಶ್ಲೇಷಣೆ ಹಾಗೂ ಮಕ್ಕಳ ಮೇಲೆ ಅವುಗಳ ಪ್ರಭಾವದ ಮೌಲ್ಯಮಾಪನವನ್ನು ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು.

ಈ ಪ್ರಕರಣಗಳಿಗೆ ಸಂಬಂಧಿಸಿದ ನಿಖರ ಮತ್ತು ನವೀಕರಿಸಿದ ಮಾಹಿತಿಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಕೆಎಸ್‌ಎಲ್‌ಎಸ್‌ಎ) ಒದಗಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಎಲ್ಲಾ ನಾಪತ್ತೆ ಪ್ರಕರಣಗಳನ್ನು ಅಪಹರಣ ಪ್ರಕರಣಗಳಾಗಿ ದಾಖಲಿಸಲಾಗುತ್ತದೆ. ಬೆಂಗಳೂರಿನಲ್ಲಿ, ವರ್ಷಕ್ಕೆ ಸರಾಸರಿ 800-1,000 ಮಕ್ಕಳ ನಾಪತ್ತೆ ಪ್ರಕರಣಗಳು ವರದಿಯಾಗುತ್ತವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT