ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ

ಬುಧವಾರ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಘಟನೆ ನಡೆದಿರುವ ಶಂಕೆಗಳ ವ್ಯಕ್ತವಾಗಿದೆ.

ಬೆಂಗಳೂರು: ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯ ಶವ ಬುಧವಾಹ ಪತ್ತೆಯಾಗಿದ್ದು, ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬಾಲಕಿ ಪೋಷಕರು ಕೊಪ್ಪಳ ಮೂಲದವರಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.

ರಾಮನಗರ ಎಸ್‌ಪಿ ಆರ್ ಶ್ರೀನಿವಾಸ್ ಗೌಡ ಅವರು ಮಾತನಾಡಿ, ಬಾಲಕಿಯ ಪೋಷಕರು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಪ್ರಸ್ತುತ ಈ ಅಪರಾಧವನ್ನು ಕೊಲೆ ಪ್ರಕರಣವೆಂದು ಪರಿಗಣಿಸಲಾಗುತ್ತಿದ್ದು, ಕೊಲೆಗೆ ಮುನ್ನ ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದುಬರಲಿದೆ ಎಂದು ಹೇಳಿದ್ದಾರೆ.

ಬುಧವಾರ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಘಟನೆ ನಡೆದಿರುವ ಶಂಕೆಗಳಿವೆ. ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದು, ಈ ವೇಳೆ ಮನೆಗೆ ನುಗ್ಗಿರುವ ಆರೋಪಿಗಳು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಂತರ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಗ್ಯಾಸ್ ಸಿಲಿಂಡರ್‌ನಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆಂದು ಶಂಕಿಸಲಾಗಿದೆ.

ಘಟನೆ ನಡೆದ ಸ್ವಲ್ಪ ಸಮಯದ ನಂತರ ಬಾಲಕಿಯ ಕಿರಿಯ ಸಹೋದರ ಮನೆಗೆ ಬಂದಿದ್ದು, ಸಹೋದರಿಯ ತಲೆಯಿಂದ ರಕ್ತಸ್ರಾವವಾಗುತ್ತಿರುವುದನ್ನು ಕಂಡು ಪೋಷಕರಿಗೆ ತಿಳಿಸಿದ್ದಾನೆ. ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, ಆರೋಪಿಗಳು ದೃಶ್ಯಾವಳಿಗಳಲ್ಲಿ ಕಂಡು ಬಂದಿದ್ದಾರೆ. ಈ ಸಂಬಂಧ ಪೋಕ್ಸಾ ಕಾಯ್ದೆಯಡಡಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ