ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ನವದೆಹಲಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಶಾಸಕರೊಂದಿಗೆ ಸಂವಾದ ನಡೆಸಿದರು. 
ರಾಜ್ಯ

ರಾಜ್ಯದ 6 ನೀರಾವರಿ ಯೋಜನೆಗಳಿಗೆ 11,122.76 ಕೋಟಿ ರೂ ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿ: DCM ಡಿ.ಕೆ ಶಿವಕುಮಾರ್

ಗೋವಾದವರು ನಮ್ಮ ಭಾಗದಲ್ಲಿ ವಿದ್ಯುತ್ ಮಾರ್ಗ ಹಾಕಲು ನಾವು ತಕರಾರು ತೆಗೆದಿದ್ದೇವೆ ಎಂದು ಹೇಳಿದ್ದಾರೆ. ನೀವು ನಮಗೆ ಸಹಕಾರ ನೀಡುವುದಾದರೆ ನಾವು ನಿಮಗೆ ನೀಡುತ್ತೇವೆ.

ನವದೆಹಲಿ/ಬೆಂಗಳೂರು: ರಾಜ್ಯದ 6 ನೀರಾವರಿ ಯೋಜನೆಗಳಿಗೆ ಒಟ್ಟು 11,122.76 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರು ನೀರಾವರಿ ಯೋಜನೆಗಳಾದ ಸೊನ್ನತಿ ಏತ ನೀರಾವರಿ ಯೋಜನೆಗೆ 804.66 ಕೋಟಿ ರೂ., ಯುಕೆಪಿಯ ಇಂಡಿ ಶಾಖಾ ಕಾಲುವೆಗೆ 2,666.70 ಕೋಟಿ ರೂ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ 3,000 ಕೋಟಿ ರೂ., ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ 1,444.42 ಕೋಟಿ ರೂ., ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ 1,610 ಕೋಟಿ ರೂ. ಸೇರಿದಂತೆ ಒಟ್ಟು 11,122.76 ಕೋಟಿ ರೂ. ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಇದರಲ್ಲಿ ಒಂದಕ್ಕೆ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. ಆದರೆ, ನಮಗೆ ಇನ್ನು ಅಧಿಕೃತವಾಗಿ ತಿಳಿಸಿಲ್ಲ ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಎಂದು ಅನುಮೋದಿಸಿ ಶೇ.25 ರಷ್ಟು ಆರ್ಥಿಕ ಸಹಾಯ ನೀಡಬೇಕಾಗಿ ಮನವಿ ಮಾಡಿದ್ದೇನೆ. ಈ ಯೋಜನೆ ಕಾಮಗಾರಿಯನ್ನು ತುಮಕೂರು ಹಾಗೂ ಹಾಸನ ಭಾಗದಲ್ಲಿ ನಿಲ್ಲಿಸಲಾಗಿತ್ತು. ಯೋಜನೆ ಹಾದು ಹೋಗುವ ಕಡೆ ಕಂದಾಯ ಭೂಮಿ ಹೊಂದಿದ್ದ ರೈತರಿಗೆ ಪೋಡಿ ವಿತರಣೆ ಮಾಡಿ ಪರಿಹಾರವನ್ನೂ ನೀಡಲಾಗಿತ್ತು. ಆದರೆ, ತದ ನಂತರ ಅರಣ್ಯ ಇಲಾಖೆಯವರು ಇದು ನಮ್ಮ ಭೂಮಿ ಎಂದು ತಕರಾರು ತೆಗೆದರು. ಅವರ ಬಳಿ ಸಂಘರ್ಷ ಬೇಡ ಎಂದು ಬದಲಿ ಭೂಮಿ ನೀಡಿದ್ದೇವೆ.

ಇದಕ್ಕೆ ಅರಣ್ಯ ಇಲಾಖೆಯವರು ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡಬೇಕಿತ್ತು, ಆದರೆ ಮಾಡಿಲ್ಲ. ಕೆಲವು ತಕರಾರುಗಳನ್ನು ಹಾಕಿದ್ದಾರೆ. ಈಗಾಗಲೇ ಕೇಂದ್ರ ಸಚಿವರನ್ನು ಮೂರು ಬಾರಿ ಭೇಟಿ ಮಾಡಲಾಗಿತ್ತು. ಆದರೂ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಕಾಲುವೆ ತೆಗೆದಾಗ ಬರುವ ಮಣ್ಣನ್ನು ಇಲ್ಲಿಯೇ ಹಾಕಲಾಗುತ್ತಿದೆ. ಬದಲಾಗಿ 25 ಕಿಲೋ ಮೀಟರ್ ದೂರ ಹಾಕಿ ಎಂಬುದು ಅವರ ಪ್ರಮುಖ ತಕರಾರು. ಕೇಂದ್ರ ಸಚಿವರು ಸದ್ಯದಲ್ಲೇ ಇದನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ ಎಂದು ತಿಳಿಸಿದರು.

ಗೋವಾದವರು ನಮ್ಮ ಭಾಗದಲ್ಲಿ ವಿದ್ಯುತ್ ಮಾರ್ಗ ಹಾಕಲು ನಾವು ತಕರಾರು ತೆಗೆದಿದ್ದೇವೆ ಎಂದು ಹೇಳಿದ್ದಾರೆ. ನೀವು ನಮಗೆ ಸಹಕಾರ ನೀಡುವುದಾದರೆ ನಾವು ನಿಮಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ಒಂದು ವಾರದಲ್ಲಿ ಇದರ ಬಗ್ಗೆ ಕೇಂದ್ರ ಪರಿಸರ ಸಚಿವರು ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ. ಮುಂದಿನ ಸಂಸತ್ ಅಧಿವೇಶನ ನಡೆಯುವುದರ ಒಳಗಾಗಿ ಮತ್ತೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದೇನೆ" ಎಂದರು.

ಕಳಸಾ ಬಂಡೂರಿ ಕಾಮಗಾರಿ ಸಂಬಂಧವಾಗಿ ಬಿಜೆಪಿ ಸರ್ಕಾರವಿದ್ದ ವೇಳೆ ಕೆಲಸ ಮಾಡಬಹುದು ಎಂದು ಹೇಳಿದರು. ಈ ಪ್ರಕಾರವಾಗಿ ನಾವು ಟೆಂಡರ್ ಅನ್ನು ಕೂಡ ಕರೆಯಲಾಯಿತು. ಆದರೆ, ಗೋವಾ ಸರ್ಕಾರ 09.01.2023 ರಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ನಮ್ಮ ಅಧಿಕಾರಿಗಳು ತಕ್ಷಣ ಉತ್ತರ ನೀಡಿ ʼನೀವು ಶೋಕಾಸ್ ನೋಟಿಸ್ ನೀಡಲು ಬರುವುದಿಲ್ಲʼ ಎಂದು ಹೇಳಿದ್ದಾರೆ. ಈ ವ್ಯಾಜ್ಯ ನ್ಯಾಯಾಲಯದಲ್ಲಿದೆ ಎಂದರು.

ಈ ವಿಚಾರವನ್ನು ಕೇಂದ್ರ ಸಚಿವರ ಗಮನಕ್ಕೆ ತಂದು ʼಗೋವಾ ಸರ್ಕಾರ ನಮಗೆ ಶೋಕಾಸ್ ನೋಟಿಸ್ ನೀಡಲು ಯಾರುʼ ಎಂದು ಕೇಳಿದ್ದೇನೆ. ನಮ್ಮ ಜಾಗದಲ್ಲಿ ನಾವು ಕಾಮಗಾರಿ ನಡೆಸುತ್ತೇವೆ. ನೀವು ಈ ವಿಚಾರವಾಗಿ ಅವರಿಗೆ ತಿಳಿ ಹೇಳಿ. ಇದರ ಬಗ್ಗೆ ಪ್ರಹ್ಲಾದ್ ಜೋಶಿ ಅವರೂ ಸಹ ಬಂದು ಮಾತನಾಡಿದರು ಎಂದು ಕೇಂದ್ರ ಸಚಿವರು ಹೇಳಿದರು. ಗೋವಾ ತಕರಾರಿನ ಬಗ್ಗೆ ಈಗಾಗಲೇ ನ್ಯಾಯಲಯದಲ್ಲಿ ದಾವೆ ಹೂಡಲಾಗಿದೆ. ನಮ್ಮ ಅರಣ್ಯ ಭೂಮಿ ಬಗ್ಗೆ ಕೇಂದ್ರ ಸರ್ಕಾರ ನಮ್ಮ ಬಳಿ ಕೇಳುತ್ತದೆ. ಗೋವಾ ನಮಗೆ ಸೂಚನೆ ನೀಡಲು ಯಾರು”ಎಂದು ಪುರುಚ್ಚರಿಸಿದರು.

ಭದ್ರಾ ಮೇಲ್ದಂಡೆ ವಿಚಾರವಾಗಿ ಮಾತನಾಡಿ, “ಈ ಬಗ್ಗೆಯೂ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರದಿಂದ ಪರಿಷ್ಕೃತ ಅಂದಾಜು ಪಟ್ಟಿ ಕೇಳಿದ್ದರು. ಅದನ್ನು ಕೂಡ ಸಲ್ಲಿಸಿದ್ದೇವೆ. ಈ ಹಿಂದೆ ಹೇಳಿದ್ದ 5,300 ಕೋಟಿ ರೂ.ಗಿಂತಲೂ ಹೆಚ್ಚು ಅನುದಾನದ ಪರಿಷ್ಕೃತ ಪಟ್ಟಿ ಕಳುಹಿಸಿದ್ದೇವೆ. ಈಗಾಗಲೇ 10,604 ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ಹೇಳಿದ್ದೇವೆ. ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಹಣ ಸರಕಾರದ ಖಾತೆಗೆ ಬರುವವರೆಗೂ ನಂಬಿಕೆಯಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಪರೇಷನ್ ಸಿಂಧೂರ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ? ಕಾಂಗ್ರೆಸ್

ಮಕ್ಕಳ ಕಣ್ಣೀರಿಗೂ ಕರಗದ ಮನಸ್ಸು: ವಿಚ್ಛೇನದ ನೀಡಿ ಪ್ರಿಯಕರನ ಜೊತೆ ಹೋಗುತ್ತಿದ್ದ ತಾಯಿಯನ್ನು ಪರಿ ಪರಿಯಾಗಿ ಬೇಡಿದ ಮಕ್ಕಳು, Video!

'Ethanol ಮಿಶ್ರಿತ ಪೆಟ್ರೋಲ್ ನಿಂದ ಮೈಲೇಜ್ 2-4% ರಷ್ಟು ಕಡಿಮೆ

ಬಾನು ಮುಷ್ತಾಕ್ ದನದ ಮಾಂಸ ತಿಂದು ದಸರಾ ಉದ್ಘಾಟಿಸಿ ಬಿಡುತ್ತಾರೇನೋ? ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ!

SCO ಶೃಂಗಸಭೆ: ಮೋದಿ ಭೇಟಿ ಹಿನ್ನೆಲೆ, ಅಮೆರಿಕದ ಸುಂಕಾಸ್ತ್ರ ವಿರುದ್ಧ ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ! ಹೇಳಿದ್ದು ಏನು?

SCROLL FOR NEXT