ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾ ರೆಡ್ಡಿ ಆಸ್ತಿಪಾಸ್ತಿ ಮೇಲೆ ಇಡಿ ದಾಳಿ  
ರಾಜ್ಯ

ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ED ಶಾಕ್: ಬೆಂಗಳೂರಿನ 5 ಕಡೆ ದಾಳಿ, ತೀವ್ರ ಶೋಧ

ಶಾಸಕ ಸುಬ್ಬಾರೆಡ್ಡಿ ಹಾಂಗ್ ಕಾಂಗ್, ಮಲೇಷ್ಯಾ ಮತ್ತು ಜರ್ಮನಿಯಾದ್ಯಂತ ಬ್ಯಾಂಕ್‌ಗಳಲ್ಲಿ ಕಪ್ಪು ಹಣ ಹೊಂದಿದ್ದಾರೆ, ಸರ್ಕಾರಕ್ಕೆ ದಾಖಲೆಗಳನ್ನು ತಿಳಿಸದೆ ವಾಹನಗಳು ಮತ್ತು ಆಸ್ತಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪವಿದೆ.

ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ 1999(FEMA)ಯ ಸೆಕ್ಷನ್ 37ರಡಿಯಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾ ರೆಡ್ಡಿಗೆ ಸಂಬಂಧಿಸಿದ ಬೆಂಗಳೂರಿನ ಐದು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ದಾಳಿ ನಡೆಸಿದ್ದಾರೆ.

ಶಾಸಕ ಸುಬ್ಬಾರೆಡ್ಡಿ ಅವರು ಹಾಂಗ್ ಕಾಂಗ್, ಮಲೇಷ್ಯಾ ಮತ್ತು ಜರ್ಮನಿಯಾದ್ಯಂತ ಬ್ಯಾಂಕ್‌ಗಳಲ್ಲಿ ಕಪ್ಪು ಹಣ ಹೊಂದಿದ್ದಾರೆ, ಸರ್ಕಾರಕ್ಕೆ ದಾಖಲೆಗಳನ್ನು ತಿಳಿಸದೆ ವಾಹನಗಳು ಮತ್ತು ಆಸ್ತಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ವಿದೇಶಗಳಲ್ಲಿನ ಬ್ಯಾಂಕ್​ ಅಕೌಂಟ್​​, ವಿದೇಶ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ.

ಶಾಸಕ ಸುಬ್ಬಾರೆಡ್ಡಿ ಮನೆ ಸೇರಿದಂತೆ ಒಟ್ಟು ಬೆಂಗಳೂರಿನ 5 ಕಡೆಗಳಲ್ಲಿ ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ.

ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್