ಎನ್ ತಿಪ್ಪಣ್ಣ  
ರಾಜ್ಯ

ಮಾಜಿ ಸಭಾಪತಿ, ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌ ತಿಪ್ಪಣ್ಣ ವಿಧಿವಶ; ಗಣ್ಯರ ಸಂತಾಪ

ಇಂದು ಬಳ್ಳಾರಿ ನಿವಾಸದಲ್ಲಿ ಅಂತಿಮ‌ ದರ್ಶನಕ್ಕೆ ಅವಕಾಶ ವ್ಯವಸ್ಥೆ ಮಾಡಲಾಗಿದ್ದು, ಹುಟ್ಟೂರು ಚಿತ್ರದುರ್ಗ ಜಿಲ್ಲೆ ತುರುವನೂರಿನಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಎನ್ ತಿಪ್ಪಣ್ಣ ಅಂತ್ಯಕ್ರಿಯೆ ನಡೆಯಲಿದೆ.

ಬೆಂಗಳೂರು: ಮಾಜಿ ಉಪಸಭಾಪತಿ, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ಅವರು ಶುಕ್ರವಾರ ನಿಧನರಾಗಿದ್ದಾರೆ. ತಿಪ್ಪಣ್ಣ ಅವರಿಗೆ 97 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಳ್ಳಾರಿ ನಿವಾಸದಲ್ಲಿ ನೆಲೆಸಿದ್ದರು. ತಿಪ್ಪಣ್ಣ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇಂದು ಬಳ್ಳಾರಿ ನಿವಾಸದಲ್ಲಿ ಅಂತಿಮ‌ ದರ್ಶನಕ್ಕೆ ಅವಕಾಶ ವ್ಯವಸ್ಥೆ ಮಾಡಲಾಗಿದ್ದು, ಹುಟ್ಟೂರು ಚಿತ್ರದುರ್ಗ ಜಿಲ್ಲೆ ತುರುವನೂರಿನಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಎನ್ ತಿಪ್ಪಣ್ಣ ಅಂತ್ಯಕ್ರಿಯೆ ನಡೆಯಲಿದೆ.

ವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿದ್ದ ತಿಪ್ಪಣ್ಣ ಅವರು, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. 4 ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿ ಕೆಲಸ ಮಾಡಿದ್ದರು.

ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ತಿಪ್ಪಣ್ಣ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದು, ಬಳ್ಳಾರಿ ಜಿಲ್ಲೆಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ​ ತಿಪ್ಪಣ್ಣ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!