ಗಾಳಿ ಆಂಜನೇಯ 
ರಾಜ್ಯ

ಮುಜರಾಯಿ ಇಲಾಖೆ ಸುಪರ್ದಿಗೆ ಪ್ರತಿಷ್ಠಿತ ಗಾಳಿ ಆಂಜನೇಯ ದೇಗುಲ: ಸಿಡಿದೆದ್ದ ಆಡಳಿತ ಮಂಡಳಿ; ರಾಮಲಿಂಗಾರೆಡ್ಡಿ ಸ್ಪಷ್ಟನೆ

ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಹಣಕಾಸಿನ ಲೆಕ್ಕವಿಲ್ಲ. ಯಾವುದೇ ದೇವಸ್ಥಾನದಲ್ಲಿ ಹಣಕಾಸಿನ ದುರುಪಯೋಗ ಆದರೆ ಅದನ್ನು ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ.

ಬೆಂಗಳೂರು: ನಗರದ ಪ್ರತಿಷ್ಠಿತ ಗಾಳಿ ಆಂಜನೇಯ ದೇಗುಲವನ್ನು ಮುಜುರಾಯಿ ಇಲಾಖೆ ಸುಪರ್ದಿಗೆ ತೆಗೆದುಕೊಂಡ ನಂತರ ದೇವಸ್ಥಾನದ ಆಡಳಿತ ಮಂಡಳಿ ಸಿಡಿದೆದ್ದಿದೆ. ಈ ಬೆನ್ನಲ್ಲೇ ಇದು ತಾತ್ಕಾಲಿಕ, 5 ವರ್ಷದ ನಂತರ ದೇಗುಲವನ್ನು ಟ್ರಸ್ಟ್‌ಗೆ ವಾಪಸ್ ಕೊಡುತ್ತೇವೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಳಿ ಆಂಜನೇಯ ಸ್ವಾಮಿ ದೇಗುಲದಲ್ಲಿ ಹಣ ದುರುಪಯೋಗ ಆಗಿದೆ. ಹೀಗಾಗಿ ಈ ಕ್ರಮ ಆಗಿದೆ. ಇದು ತಾತ್ಕಲಿಕ ಅಷ್ಟೇ. 5 ವರ್ಷದ ಬಳಿಕ ದೇಗುಲವನ್ನು ಮಂಡಳಿಗೆ ವಾಪಸ್ ಕೊಡುತ್ತೇವೆ. ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಹಣಕಾಸಿನ ಲೆಕ್ಕವಿಲ್ಲ. ಯಾವುದೇ ದೇವಸ್ಥಾನದಲ್ಲಿ ಹಣಕಾಸಿನ ದುರುಪಯೋಗ ಆದರೆ ಅದನ್ನು ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಸುಮಾರು 10 ದೇವಾಲಯಗಳನ್ನು ವಶಕ್ಕೆ ಪಡೆದುಕೊಂಡಿತ್ತು ಎಂದು ಹೇಳಿದರು.

ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆಯ ಸಂದರ್ಭದಲ್ಲಿ ಸಿಬ್ಬಂದಿಯೇ ಕಳ್ಳತನ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದು ದೇವಾಲಯದಲ್ಲಿ ಆಡಳಿತ ನಿರ್ವಹಣೆ ಸರಿ ಇಲ್ಲ ಎಂಬುದನ್ನು ತೋರಿಸಿತ್ತು.

ಈ ದೇವಾಲಯವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್‌ 42 ಮತ್ತು 43ರ ಅನ್ವಯ ಸರ್ಕಾರದ ವಶಕ್ಕೆ ಪಡೆಯಲು ಸ್ಪಷ್ಟ ಅಭಿಪ್ರಾಯದ ವರದಿ ನೀಡುವಂತೆ ಧಾರ್ಮಿಕ ದತ್ತಿ ಆಯುಕ್ತರು ಜಿಲ್ಲಾಧಿಕಾರಿಗೆ 2024ರ ಅಕ್ಟೋಬರ್‌ನಲ್ಲಿ ಸೂಚಿಸಿದ್ದರು. ಗುರುವಾರ ಮುಜರಾಯಿ ಇಲಾಖೆಯು ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿತ್ತು.

ಇದೀಗ ಮುಜರಾಯಿ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸು ಮಾಡಿತ್ತು. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಅಂತ ಘೋಷಣೆ ಮಾಡಿತ್ತು. ಈ ಆದೇಶದ ಬೆನ್ನಲ್ಲೇ ದೇವಸ್ಥಾನದ ಟ್ರಸ್ಟಿಗಳು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದರು.

ದೇವಸ್ಥಾನವನ್ನು ಸರ್ಕಾರ ಸುಪರ್ದಿಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದು ಹೇಳಿ ದೇವಸ್ಥಾನದ ಆಡಳಿತ ಮಂಡಳಿ 12 ಗಂಟೆಗೆ ತುರ್ತು ಸಭೆ ಕರೆದಿತ್ತು. ಸಭೆ ಬಳಿಕ ನಾವು ಕಾನೂನು ಹೋರಾಟ ಮಾಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು.

ಲಕ್ಷಾಂತರ ರೂಪಾಯಿ ಆದಾಯ ಇರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳ ನಡುವೆ ಹೊಂದಾಣಿ ಇಲ್ಲ. ಪ್ರತಿವರ್ಷವೂ ಉಳಿತಾಯವಿಲ್ಲದಂತೆ ವೆಚ್ಚ ಮಾಡಲಾಗುತ್ತಿದೆ. ಇದರಿಂದ ದೇವಸ್ಥಾನದ ಹಣವು ದುರುಪಯೋಗವಾಗುತ್ತಿರುವುದು ಸ್ಪಷ್ಟವಾಗಿ ಕಂಡು ಬಂದಿದೆ. ಅಲ್ಲದೇ ಆದಾಯ ಮತ್ತು ವೆಚ್ಚಕ್ಕೆ ಸಂಬಂಧಿಸಿದಂತೆ 25 ವರ್ಷಗಳಿಂದ ಯಾವುದೇ ದಾಖಲೆಗಳನ್ನು ಇಟ್ಟಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

34 ಮಾನವ ಬಾಂಬ್‌, 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ; ಎಲ್ಲೆಡೆ ಕಟ್ಟೆಚ್ಚರ!

'Delhi Metroಗೆ ಹೋಲಿಕೆ ಮಾಡಿದರೆ Bengaluru Metro ದರ ಅತ್ಯಂತ ದುಬಾರಿ': BMRCL, ರಾಜ್ಯ ಸರ್ಕಾರದ ವಿರುದ್ಧ Tejasvi Surya ಕಿಡಿ!

ಡಿಕೆ ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ಸೇರಿ 60 ಕ್ರಿಮಿನಲ್ ಕೇಸ್‌ ವಾಪಸ್‌ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ!

ಶ್ರೀಲಂಕಾ: 1,000 ಅಡಿ ಆಳದ ಪ್ರಪಾತಕ್ಕೆ ಉರುಳಿಬಿದ್ದ ಬಸ್; 15 ಮಂದಿ ಸಾವು, 16 ಜನರಿಗೆ ಗಾಯ

"Dismantle India": 'ಭಾರತವನ್ನು ಕೆಡವಿ, ವಿಭಜಿಸಿ' ಎಂದ ಆಸ್ಟ್ರಿಯಾ ಅರ್ಥಶಾಸ್ತ್ರಜ್ಞನ 'X' ಖಾತೆ ನಿಷೇಧ!

SCROLL FOR NEXT