ನೂತನ ರೈಲಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಹಸಿರು ನಿಶಾನೆ 
ರಾಜ್ಯ

ಚಿಕ್ಕಮಗಳೂರು-ತಿರುಪತಿ ನೂತನ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ

ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ

ಚಿಕ್ಕಮಗಳೂರು: ನೂತನ ಚಿಕ್ಕಮಗಳೂರು- ತಿರುಪತಿ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ಹಾಗು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಇಂದು ಚಿಕ್ಕಮಗಳೂರು ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ವಿ. ಸೋಮಣ್ಣ, ಧಾನಿ ನರೇಂದ್ರ ಮೋದಿ ಅವರು 3 ನೇ ಭಾರಿಗೆ ದೇಶದ ಪ್ರಧಾನಿಗಳಾದ ನಂತರ ರೈಲ್ವೆ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಕೆಲಸ ಮಾಡಿದ್ದಾರೆ. ಅದರ ಭಾಗವಾಗಿ ಹಲವು ದಶಕದ ಕನಸಾಗಿದ ಚಿಕ್ಕಮಗಳೂರು -ತಿರುಪತಿ ರೈಲು ಸಂಚಾರಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.

ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹಾಗೆಯೇ ಚಿಕ್ಕಮಗಳೂರು- ಬೇಲೂರು- ಹಾಸನ ರೈಲು ಮಾರ್ಗಕ್ಕೆ ಹಳಿ ಹಾಕುವ ಕಾರ್ಯ ಹಾಗು ಭೂ ಸ್ವಾಧೀನ ಕಾರ್ಯಗಳು ನಡೆಯುತಿದ್ದು, ಇನ್ನು ಎರಡೂವರೆ ವರ್ಷದಲ್ಲಿ ರೈಲು ಸಂಚಾರ ಆರಂಭವಾಗಲಿದೆ. ಶಿವಮೊಗ್ಗ- ಶೃಂಗೇರಿ -ಮಂಗಳೂರು ನೂತನ ರೈಲು ಮಾರ್ಗಕ್ಕೆ ಸರ್ವೆ ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಎಲ್.ಸಿ ರೈಲು ಗೇಟ್ ಬಂದ್ ಮಾಡಿ ಅಲ್ಲಿ ಮೇಲ್ಸೇತುವೆ, ಕೆಳ ಸೇತುವೆ ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಈಗಾಗಲೆ 644 ಗೇಟ್‌ಗಳ ಕಾರ್ಯ ಪೂರ್ಣಗೊಳಿಸಲಾಗಿದೆ. ಕರ್ನಾಟಕದಲ್ಲಿ 1,981 ಕೋಟಿ ರೂ. ವೆಚ್ಚ ಮಾಡಿದ್ದು, 61 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT