ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಕ್ಕೆ ನಜ್ಜುಗುಜ್ಜಾದ ಕಾರು  
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್​ ಬೆಂಗಳೂರಿಗೆ ತೆರಳುವಾಗ ದುರಂತ ಸಂಭವಿಸಿದೆ.

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಇಂದು ಭಾನುವಾರ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬೆಳಗಿನ ಜಾವ ಘಟನೆ ನಡೆದಿದೆ. ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56ವ), ಪುತ್ರ ಮುತ್ತುರಾಜ್ (28ವ) ಮತ್ತು ಹಾಸನ ಮೂಲದ ಚಾಲಕ ಸಚಿನ್ (27ವ) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಜು ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್​ ಬೆಂಗಳೂರಿಗೆ ತೆರಳುವಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಮತಗಳ್ಳತನ': ಆಳಂದ ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ SIT ದಾಳಿ; Video

ನೀನು ನೇರವಾಗಿ ನನ್ನನ್ನೇ ಕೇಳಬೇಕಿತ್ತು: BCCI ಆಯ್ಕೆ ಸಮಿತಿ ವಿರುದ್ಧ ಮೊಹಮ್ಮದ್ ಶಮಿ ಆರೋಪಕ್ಕೆ ಮೌನ ಮುರಿದ ಅಜಿತ್ ಅಗರ್ಕರ್!

ಚಾಮರಾಜನಗರ: 27 ತಿಂಗಳಿಂದ ಸಿಗದ ಸಂಬಳ, ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ 'ವಾಟರ್ ಮ್ಯಾನ್' ಆತ್ಮಹತ್ಯೆ!

ಶ್ರೀಲಂಕಾ ಪ್ರಧಾನಿಯಿಂದ ಮೋದಿ ಭೇಟಿ; ಭಾರತೀಯ ಮೀನುಗಾರರ ಸಮಸ್ಯೆ ಬಗ್ಗೆ ಚರ್ಚೆ

ರಾಯಚೂರು: RSS ಪಥಸಂಚಲನದಲ್ಲಿ ಭಾಗಿ, PDO ಅಮಾನತು!

SCROLL FOR NEXT