ಸಂಗ್ರಹ ಚಿತ್ರ 
ರಾಜ್ಯ

ನಾಳೆಯಿಂದ ಬೆಂಗಳೂರಿನಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂಗಳು, ವಿವಿಧ ರಾಜ್ಯಗಳ ಹಾಲಿ ಮತ್ತು ಮಾಜಿ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಜುಲೈ 15 ಮತ್ತು 16 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಸೋಮವಾರ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂಗಳು, ವಿವಿಧ ರಾಜ್ಯಗಳ ಹಾಲಿ ಮತ್ತು ಮಾಜಿ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ಜುಲೈ 15 ರಂದು ಸಂಜೆ 5 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಮತ್ತು ಜುಲೈ 16 ರಂದು ಬೆಳಿಗ್ಗೆ 10 ಗಂಟೆಗೆ ಹೋಟೆಲ್ ಶಾಂಗ್ರಿಲಾದಲ್ಲಿ ಸಭೆ ನಡೆಯಲಿದೆ ಎಂದು ಅದು ತಿಳಿಸಿದೆ.

ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಸಲಹಾ ಮಂಡಳಿಯನ್ನು ಎಐಸಿಸಿ ರಚಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಅನುಮೋದನೆ ನೀಡಿದ್ದು, ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ. ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಒಟ್ಟು 24 ಸದಸ್ಯರು ಈ ಮಂಡಳಿಯಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ: Donald Trump

ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಡಿಸಿಎಂ ಆಗುತ್ತೀರೋ, ಜೈಲಿಗೆ ಹೋಗುತ್ತೀರೋ ಎಂದು ಬಿಜೆಪಿಯಿಂದ ಆಫರ್ ಬಂದಿತ್ತು, ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿಕೆಶಿ

ನಾವು ಹಿಂದುಳಿದ ಜಾತಿಗೆ ಸೇರಿಲ್ಲ: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಾರಾಯಣಮೂರ್ತಿ- ಸುಧಾಮೂರ್ತಿ ನಿರಾಕರಣೆ!

Haryana cop suicide case: ಐಪಿಎಸ್ ಅಧಿಕಾರಿ ಪುರಣ್ ಕುಮಾರ್ IAS ಪತ್ನಿ ವಿರುದ್ಧ ಎಫ್‌ಐಆರ್ ದಾಖಲು!

SCROLL FOR NEXT