ಮೃತ ಹುಲಿಗಳು 
ರಾಜ್ಯ

ಐದು ಹುಲಿಗಳ ಸಾವು: ಡಿಸಿಎಫ್ ಚಕ್ರಪಾಣಿ ಅಮಾನತುಗೊಳಿಸಿ ಸರ್ಕಾರ ಆದೇಶ

ಜೂನ್ 26 ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷಪ್ರಾಶನದಿಂದ ಒಂಬತ್ತು ವರ್ಷದ ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವನ್ನಪ್ಪಿದ ಪ್ರಕರಣದ ಬಗ್ಗೆ ಇಲಾಖಾ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಆದೇಶಿಸಿದ್ದರು.

ಬೆಂಗಳೂರು: ಮಲೆ ಮಹದೇಶ್ವರ(ಎಂಎಂ) ಬೆಟ್ಟದಲ್ಲಿ ಐದು ಹುಲಿಗಳ 'ಅಸ್ವಾಭಾವಿಕ ಸಾವು' ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಉಪ ಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್) ವೈ ಚಕ್ರಪಾಣಿ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಜೂನ್ 26 ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷಪ್ರಾಶನದಿಂದ ಒಂಬತ್ತು ವರ್ಷದ ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವನ್ನಪ್ಪಿದ ಪ್ರಕರಣದ ಬಗ್ಗೆ ಇಲಾಖಾ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಆದೇಶಿಸಿದ್ದರು.

ಘಟನೆಯ ತನಿಖೆಗಾಗಿ ರಚಿಸಲಾದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಎಪಿಸಿಸಿಎಫ್) ಕುಮಾರ್ ಪುಷ್ಕರ್ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿ ಸಲ್ಲಿಸಿದ ಪ್ರಾಥಮಿಕ ವರದಿಯನ್ನು ಆಧರಿಸಿ ಈಶ್ವರ್ ಖಂಡ್ರೆ ಅವರು ವೈ ಚಕ್ರಪಾಣಿ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚಿಸಿದ್ದಾರೆ. ಅದರಂತೆ ಇಂದು ಡಿಸಿಎಫ್ ಚಕ್ರಪಾಣಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

"ಹುಲಿಗಳ ಅಸಹಜ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪದ ಸ್ಪಷ್ಟ ಪುರಾವೆಗಳ ಆಧಾರದ ಮೇಲೆ, ಡಿಸಿಎಫ್ ವೈ ಚಕ್ರಪಾಣಿ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸಚಿವರು ಶಿಫಾರಸು ಮಾಡಿದ್ದಾರೆ" ಎಂದು ಖಂಡ್ರೆ ಅವರ ಕಚೇರಿ ಇತ್ತೀಚಿಗೆ ಪ್ರಕಟಣೆಯಲ್ಲಿ ತಿಳಿಸಿತ್ತು.

ಕಳೆದ ಮೂರು ತಿಂಗಳಿನಿಂದ, ಮುಂಚೂಣಿಯ ಗುತ್ತಿಗೆ ಸಿಬ್ಬಂದಿಗೆ ಅವರ ವೇತನ ಅಥವಾ ಭತ್ಯೆಯನ್ನು ಪಾವತಿಸಲಾಗಿಲ್ಲ. ಇದು ಗಸ್ತು ಚಟುವಟಿಕೆಗಳಿಗೆ ಅಡ್ಡಿಯಾಗಿದೆ ಎಂದು ತನಿಖಾ ವರದಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT