ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಶಾಲಾ ಆವರಣದ ಟ್ಯಾಂಕ್‌ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ..!

ಶಾಲೆಯಲ್ಲಿ 41 ಮಕ್ಕಳಿದ್ದು ಅಲ್ಲದೆ ಈ ಶಾಲೆಯ ಪಕ್ಕದಲ್ಲೇ 20 ಅಧಿಕ ಮನೆಗಳಿದ್ದು, ಎಲ್ಲರೂ ಈ ಟ್ಯಾಂಕಿನ ನೀರನ್ನೇ ಅವಲಂಭಿಸಿದ್ದರು ಎನ್ನಲಾಗಿದೆ.

ಬೆಳಗಾವಿ: ಶಾಲಾ ಆವರಣದಲ್ಲಿದ್ದ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶಾಲೆಯಲ್ಲಿ 41 ಮಕ್ಕಳಿದ್ದು ಅಲ್ಲದೆ ಈ ಶಾಲೆಯ ಪಕ್ಕದಲ್ಲೇ 20 ಅಧಿಕ ಮನೆಗಳಿದ್ದು, ಎಲ್ಲರೂ ಈ ಟ್ಯಾಂಕಿನ ನೀರನ್ನೇ ಅವಲಂಭಿಸಿದ್ದರು ಎನ್ನಲಾಗಿದೆ.

ಸೋಮವಾರ ಮುಂಜಾನೆ 6 ಗಂಟೆಯ ಸುಮಾರಿಗೆ ಇದೇ ಟ್ಯಾಂಕಿನ ಮೂಲಕ ನೀರು ಸಂಗ್ರಹ ಮಾಡಲಾಗಿದೆ. ಇದಾದ ಬಳಿಕವಷ್ಟೇ ಇದಕ್ಕೆ ಕೀಟನಾಶಕ ಬೆರಸಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಳಿಗ್ಗೆ 6 ಗಂಟೆಯ ಮೊದಲು ಹಲವು ಕುಟುಂಬಗಳು ಟ್ಯಾಂಕ್‌ನಿಂದ ನೀರು ಸಂಗ್ರಹಿಸಿದ್ದವು. ಆದರೆ, ಅವರಲ್ಲಿ ಯಾರಿಗೂ ಆರೋಗ್ಯ ಸಮಸ್ಯೆಗಳು ಕಂಡು ಬಂದಿಲ್ಲ. ಬಳಿಕ ನೀರು ಸೇವಿಸಿದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದಿದೆ. ಅಪರಿಚಿತ ವ್ಯಕ್ತಿಗಳು ನೀರಿನ ಟ್ಯಾಂಕ್'ಗೆ ಕೀಟನಾಶಕ ಬೆರೆಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.

ನೀರು ಕುಡಿದ ತಕ್ಷಣ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೇ ಆರೋಗ್ಯ ಇಲಾಖೆ ಸಿಬ್ಬಂದಿ ಶಾಲೆಗೆ ಆಗಮಿಸಿ ಸೂಕ್ತ ಮುನ್ನಚ್ಚರಿಕೆ ಕ್ರಮ ವಹಿಸಿದ್ದಾರೆ.

ಶಾಲೆಗೆ ಭೇಟಿ ನೀಡಿದ ಸೌದತ್ತಿ ತಹಸೀದಾರ್ ಎಸ್ ಹೆಗ್ಗಣ್ಣವರ್ ಪರಿಸ್ಥಿತಿಯನ್ನು ಅವಲೋಕಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋದಿ ಜೊತೆ ಮಾತನಾಡಿದ್ದೇನೆ, ಭಾರತ ರಷ್ಯಾದಿಂದ ತೈಲ ಖರೀದಿಯನ್ನು ಕಡಿಮೆ ಮಾಡಿದೆ: Donald Trump

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಆಚರಣೆ: ಪ್ರಧಾನಿ ಮೋದಿ ‘ಮಹಾನ್ ವ್ಯಕ್ತಿ, ಉತ್ತಮ ಸ್ನೇಹಿತ’ ಎಂದು ಕೊಂಡಾಡಿದ ಡೊನಾಲ್ಡ್ ಟ್ರಂಪ್

ಮಹಿಳೆಯರಿಗೆ ಆನ್‌ಲೈನ್ 'ಜಿಹಾದಿ ಕೋರ್ಸ್' ಆರಂಭಿಸಿದ ಜೈಶ್ ಉಗ್ರ ಸಂಘಟನೆ, ಶುಲ್ಕ ಕೇವಲ 500 ರೂ!

Karnataka Weather-ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ವರ್ಷಧಾರೆ, ಅ.29ರವರೆಗೆ ಮಳೆ ಸೂಚನೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹಾಸನಾಂಬೆ ದರ್ಶನ ಇಂದು ಕೊನೆ: 8 ಕಿ.ಮೀ ವರೆಗೆ ಧರ್ಮ ದರ್ಶನ ಸಾಲು

SCROLL FOR NEXT